ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

CHITRADURGA NEWS | 07 MAY 2024

ಚಿತ್ರದುರ್ಗ: ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡು ವ್ಯಾಪ್ತಿಯಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದನ್ನೂ ಓದಿ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ | ಲಂಚದ ಹಣದ ಸಮೇತ ಎಸ್.ವೈ.ಬಸವರಾಜಪ್ಪ ಬಂಧನ

ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಮೇ.7 ರಿಂದ ಮೇ.10ರವರೆಗೆ ಮಳೆಯಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಳೆ ಸಮೀಕ್ಷೆ ಕ್ರಮಬದ್ಧವಾಗಿಲ್ಲ | ಅಚಾತುರ್ಯ ನಡೆಸಿದ ಪಿಡಿಓಗಳಿಗೆ ನೋಟೀಸ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಇದಕ್ಕೆ ಪೂರಕವಾಗಿ ಮೇ.6 ಸೋಮವಾರ ಸಂಜೆ ಚಳ್ಳಕೆರೆ ತಾಲೂಕಿನ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದೆ.

ವಿಪರೀತ ಬಿಸಲು, ಸೆಖೆಯಿಂದ ಕಂಗೆಟ್ಟಿರುವ ಜನರಿಗೆ ಮಳೆ ಅನಿವಾರ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ರೈತರು ಟ್ಯಾಂಕರ್‍ಗಳಿಂದ ತೋಟಗಳಿಗೆ ನೀರು ಹೊಡೆದು ಉಳಿಸುವ ಹರಸಾಹಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೇ.8 ರಿಂದ 10ರವರೆಗೆ ಮುರುಘಾ ಮಠದಲ್ಲಿ ಬಸವ ಜಯಂತಿ

ತಕ್ಷಣಕ್ಕೆ ಮಳೆ ಬಂದರೆ ಅಳಿವಿನ ಅಂಚಿನಲ್ಲಿರುವ ತೋಟಗಳನ್ನು ಉಳಿಸಿಕೊಳ್ಳಬಹುದು. ದಿನವೂ ಸಾವಿರಾರು ರೂಪಾಯಿ ಖರ್ಚು ಮಾಡಿ ಟ್ಯಾಂಕರ್ ನೀರು ಖರೀಧಿಸಿ ತಂದು ಸುರಿಯುತ್ತಿರುವ ರೈತರ ಜೇಬಿನ ಹೊರೆಯೂ ಕಡಿಮೆ ಆಗಬಹುದು. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಉತ್ತಮ ಮಳೆ ಸುರಿಯಲಿ ಎಂದು ರೈತರು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version