ಮುಖ್ಯ ಸುದ್ದಿ
ಇಂದು ಕೂಡಾ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

CHITRADURGA NEWS | 08 MAY 2024
ಚಿತ್ರದುರ್ಗ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ.7 ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕಿನ ಕೆಲವೆಡೆ ಮಳೆಯಾಗಿದೆ.
ಇದನ್ನೂ ಓದಿ: ಆರ್ಭಟಿಸಿಕೊಂಡು ಬಂದ ಮಳೆರಾಯ | ಹಿರಿಯೂರಿನಲ್ಲಿ ಗಾಳಿ, ಮಳೆ, ಗುಡುಗು, ಸಿಡಿಲು
ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕಿನ ಧರ್ಮಪುರ ಬಳಿ ತೆಂಗಿನ ಮರಗಳಿಗೆ ಸಿಡಲು ಬಡಿದು ಹಾನಿಯಾಗಿದೆ.
ಈ ನಡುವೆ ಹವಾಮಾನ ಇಲಾಖೆ ಮುಂದುವರೆದ ಮಳೆ ಮುನ್ಸೂಚನೆ ನೀಡಿದ್ದು, ಮೇ.8 ಬುಧವಾರ ಕೂಡಾ ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಮುರುಘಾ ಮಠದಲ್ಲಿ ಎಸ್‍ಜೆಎಂ ವಿದ್ಯಾಪೀಠದ ನೌಕರರ ಸಮಾಲೋಚನಾ ಸಭೆ
ಮೈಸೂರು, ಕೊಡಗು, ಉಡುಪಿ, ಮಂಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ತಿಳಿಸಿದೆ.
ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
