CHITRADURGA NEWS | 18 OCTOBEER 2024
ಚಿತ್ರದುರ್ಗ: ಕಳೆದ 3 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ(Rain)ಗೆ ಜಿಲ್ಲೆಯಲ್ಲಿ ಗುರುವಾರ 80 ಮನೆಗಳು ಹಾನಿ(Damage)ಯಾಗಿದ್ದು, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಅತೀ ಹೆಚ್ಚು ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: APMC; ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ಧಾರಣೆ ಎಷ್ಟಿದೆ?
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 10.9 ಮಿ.ಮೀ, ನಾಯಕನಹಟ್ಟಿ 24.1 ಮಿ.ಮೀ, ಪರಶುರಾಂಪುರ 15.4 ಮಿ.ಮೀ, ತಳಕು 11.4 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 5.2 ಮಿ.ಮೀ, ಭರಮಸಾಗರ 10.1 ಮಿ.ಮೀ, ಹಿರೇಗುಂಟನೂರು 10.8 ಮಿ.ಮೀ, ತುರುವನೂರು 3.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು 23 ಮಿ.ಮೀ, ಐಮಂಗಲ 20.7 ಮಿ.ಮೀ, ಧರ್ಮಪುರ 9.3 ಮಿ.ಮೀ, ಜವನಗೊಂಡನಹಳ್ಳಿ 5.5 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 22.2 ಮಿ.ಮೀ, ಬಿ.ದುರ್ಗ 9 ಮಿ.ಮೀ, ರಾಮಗಿರಿ 22 ಮಿ.ಮೀ, ತಾಳ್ಯ 2.5 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: College: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಸಾವು
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 20.3 ಮಿ.ಮೀ, ಮಾಡದಕೆರೆ 2 ಮಿ.ಮೀ, ಮತ್ತೋಡು 0.3 ಮಿ.ಮೀ, ಶ್ರೀರಾಂಪುರ 1 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 8.5 ಮಿ.ಮೀ ಹಾಗೂ ದೇವಸಮುದ್ರದಲ್ಲಿ 10.9 ಮಿ.ಮೀ ಮಳೆಯಾಗಿದೆ.
80 ಮನೆಗಳು ಭಾಗಶಃ ಹಾನಿ:
ಗುರುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಭಾಗಶಃ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.
ಕ್ಲಿಕ್ ಮಾಡಿ ಓದಿ: VV sagara; ವಿವಿ ಸಾಗರಕ್ಕೆ ಭರ್ಜರಿ ನೀರು | ಭರ್ತಿಗೆ ಐದು ಅಡಿ ಬಾಕಿ
ಚಿತ್ರದುರ್ಗ ತಾಲ್ಲೂಕಿನಲ್ಲಿ 24 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 15 ಮನೆಗಳು, ಹೊಳಲ್ಕೆರೆ 14 ಮನೆಗಳು, ಹೊಸದುರ್ಗ 5 ಮನೆಗಳು ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ನೀರು ನುಗ್ಗಿವೆ.
ಹಿರಿಯೂರು ತಾಲ್ಲೂಕಿನಲ್ಲಿ 17 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
