CHITRADURGA NEWS | 16 AUGUST 2024
ಹೊಳಲ್ಕೆರೆ: ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ, ಹೊಳಲ್ಕೆರೆ ತಾಲೂಕು ಅಪ್ಪರಸನಹಳ್ಳಿ ಬಸವರಾಜಪ್ಪ ಆಗಸ್ಟ್ 15 ಗುರುವಾರ ರಾತ್ರಿ 11.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.


ರೈತ ಸಂಘದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಮುಂಚೂಣಿಯಲ್ಲಿದ್ದು ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಸ್ನೇಹ ಜೀವಿ ಬಸವರಾಜಪ್ಪ ಅವರ ಅಕಾಲಿಕ ಮರಣದಿಂದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ತುಂಬಲಾರದ ನಷ್ಟವಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರ ಅಭಿನಂದನಾ ಸಮಾರಂಭಕ್ಕೆ NPS ನೌಕರರ ಬಹಿಷ್ಕಾರ
ಇತ್ತೀಚೆಗೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಬಳಿ ಭದ್ರಾ ಮೇಲ್ದಂಡೆ ಯೋಜನೆಗಾಗಿ ಸತತ ಒಂದು ತಿಂಗಳ ರೈತ ಸಂಘದಿಂದ ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರದಲ್ಲೂ ಬಸವರಾಜಪ್ ಭಾಗವಹಿಸಿದ್ದರು.
ಬಸವರಾಜಪ್ಪ ಅವರ ಅಂತ್ಯಸಂಸ್ಕಾರ ಆ.16 ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಅಪ್ಪರಸನಹಳ್ಳಿಯ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾಜಿ ಶಾಸಕ SKB ಅಭಿಮಾನಿ ಬಳಗದಿಂದ ಸಂಸದ ಗೋವಿಂದ ಕಾರಜೋಳಗೆ ಅಭಿನಂದನೆ
ಬಸವರಾಜಪ್ಪ ಅವರ ನಿಧನಕ್ಕೆ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಸೇರಿದಂತೆ ರೈತ ಮುಖಂಡರು, ಕಾರ್ಯಕರ್ತರು ಕಂಬನಿ ವ್ಯಕ್ತಪಡಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
