CHITRADURGA NEWS | 24 August 2026
ಚಿತ್ರದುರ್ಗ: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ನೋ), ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ದುರ್ಗದ ಕೊನೆಯ ಆಡಳಿತಗಾರ, ವೀರ ಹಾಗೂ ಸ್ವಾಭಿಮಾನದ ಪ್ರತೀಕ ರಾಜಾ ವೀರ ಮದಕರಿ ನಾಯಕ ಅವರ ಜಯಂತಿಯನ್ನು ಅಕ್ಟೋಬರ್ 12 ಮತ್ತು 13ರಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ | ಬಿ.ಸಿ.ಶಾಂತರಾಜ್
ಮದಕರಿ ನಾಯಕರ ಜೀವನ, ಹೋರಾಟ ಹಾಗೂ ಸಾಧನೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಎರಡು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಹಾಗೂ ವೈಚಾರಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಅ.12ರಂದು ರಥಯಾತ್ರೆ, ಮೆರವಣಿಗೆ:
ಅಕ್ಟೋಬರ್ 12ರಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ರಾಜಾ ವೀರ ಮದಕರಿ ನಾಯಕರ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳನ್ನೊಳಗೊಂಡ ಆಕರ್ಷಕ ರಥಯಾತ್ರೆ ಹಾಗೂ ಭವ್ಯ ಮೆರವಣಿಗೆ ನಡೆಯಲಿದೆ.
ಅ.13ರಂದು ವಿಶೇಷ ಕಾರ್ಯಕ್ರಮ:
ಅಕ್ಟೋಬರ್ 13ರಂದು ಬೆಳಿಗ್ಗೆ ಸೇವಾಕರ್ತರಾದ ಮಾಜಿ ನಗರಸಭಾ ಅಧ್ಯಕ್ಷೆ ಶ್ರೀಮತಿ ತಿಪ್ಪಮ್ಮ ವೆಂಕಟೇಶ್ ಹಾಗೂ ಕುಟುಂಬದವರಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ವಿವಿಧ ಮಹಾನ್ ನಾಯಕರ ಪ್ರತಿಮೆಗಳಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಯಂತಿ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು.
ಇದನ್ನೂ ಓದಿ: ಡಾ.ಹೇಮಂತರಾಜು ಅವರ ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆ
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ರಾಜಾ ವೀರ ಮದಕರಿ ನಾಯಕರ ಇತಿಹಾಸದ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಉಳಿದ ಕಾರ್ಯಕ್ರಮಗಳು, ಗಣ್ಯ ಅತಿಥಿಗಳ ವಿವರ ಹಾಗೂ ಇತರ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಐತಿಹಾಸಿಕ ಜಯಂತ್ಯುತ್ಸವದಲ್ಲಿ ಜಿಲ್ಲೆಯ ಸಾರ್ವಜನಿಕರು, ನಾಯಕ ಸಮಾಜದ ಬಾಂಧವರು ಹಾಗೂ ದೇಶಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

