ಹೊಸದುರ್ಗ: ಹೊಸದುರ್ಗ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪುರಸಭೆ ಅಧ್ಯಕ್ಷರಾಗಿ ರಾಜೇಶ್ವರಿ ಆನಂದ್ ಹಾಗೂ ಉಪಾಧ್ಯಕ್ಷರಾಗಿ ಗೀತಾ ಆಸಂಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಪೈಪೋಟಿ ನಡುವೆ ಅವಿರೋಧ ಆಯ್ಕೆ | ನಗರಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೇಶ್ವರಿ ಆನಂದ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರೆ, ಬಿಸಿಎಂ ಎ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಆಸಂಗಿ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ವಿವಿ ಸಾಗರ ಒಳ ಹರಿವು ಹೆಚ್ಚಳ | ಜಲಾಶಯದ ಇಂದಿನ ನೀರಿನ ಮಟ್ಟ
23 ಸದಸ್ಯ ಬಲದ ಹೊಸದುರ್ಗ ಪುರಸಭೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 4 ಹಾಗೂ ಪಕ್ಷೇತರ 5 ಸದಸ್ಯರು ಗೆದ್ದಿದ್ದರು.
ವಿಜಯೋತ್ಸವದಲ್ಲಿ ಗೋವಿಂದ ಕಾರಜೋಳ ಭಾಗೀ:
ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಅಭ್ಯರ್ಥಿಗಳಿಬ್ಬರೂ ಅವಿರೋಧವಾಗಿ ಆಯ್ಕೆಯಾದ ನಂತರ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ವಿಜಯೋತ್ಸವ ನಡೆಯಿತು.
ಇದನ್ನೂ ಓದಿ: ದಿನ ಭವಿಷ್ಯ | ಆಗಸ್ಟ್ 22 | ಚಿತ್ರದುರ್ಗ ನ್ಯೂಸ್
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಬಿಜೆಪಿ ಹೊಸದುರ್ಗ ತಾಲೂಕು ಘಟಕದ ಅಧ್ಯಕ್ಷ ಆರ್.ಜಗದೀಶ್ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
