
CHITRADURGA NEWS | 22 MAY 2024
ಚಿತ್ರದುರ್ಗ: ನಗರಸಭೆ ಪೌರಾಯುಕ್ತೆ ರೇಣುಕಾ ನೇತೃತ್ವದಲ್ಲಿ ಮಂಗಳವಾರ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರಾಜುಕಾಲುವೆ ಒತ್ತುವರಿ ತೆರವುಯನ್ನು ಮಾಡಲಾಯಿತು.
ಇದನ್ನೂ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ | ಅಧಿಕ ಸಿಬ್ಬಂದಿ ನಿಯೋಜನೆಗೆ ಕಡಿವಾಣ
ಹಳ್ಳದ ಏರಿಯಾದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆಯಲ್ಲಿ ತುಂಬಿಕೊಂಡಿದ್ದ ಮಣ್ಣನ್ನು ಜೆ.ಸಿ.ಬಿ. ಮೂಲಕ ತೆಗೆಸಿ ಮಳೆ ನೀರು ಸರಾಗವಾಗಿ ಹರಿಯಲು ಅನುವು ಮಾಡಲಾಯಿತು.
ಈ ವೇಳೆ ಮಾತನಾಡಿದ ಅವರು, ಚಂದ್ರವಳ್ಳಿ ಕೆರೆ ತುಂಬಿ ಕೋಡಿ ಬಿದ್ದರೆ ನೀರು ನುಗ್ಗಿ ಅನಾಹುತವಾಗುವುದನ್ನು ತಪ್ಪಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜ ಕಾಲುವೆ ಒತ್ತುವರಿಯಾಗಿರುವುದರ ಕುರಿತು ಸರ್ವೆ ನಡೆಸುವಂತೆ ಸರ್ವೆ ಇಲಾಖೆಗೆ ಕೇಳಿಕೊಂಡಿದ್ದೇವೆ.
ಇದನ್ನೂ ಓದಿ: ಪಿಯುಸಿ ಸೈನ್ಸ್ ಕನ್ನಡದಲ್ಲೂ ಓದಬಹುದು | ಪ್ರತ್ಯೇಕ ವಿಭಾಗ ತೆರೆಯಲು ಡಿಸಿ ಸೂಚನೆ
ಇದುವರೆಗೂ ಅವರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ರಾಜಕಾಲುವೆಯಲ್ಲಿನ ಮಣ್ಣನ್ನು ತೆಗೆಸುತ್ತಿದ್ದೇವೆ. ಮುಂದೆ ಸರ್ವೆ ಆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಕಂಟೇನರ್ ಲಾರಿಯಲ್ಲಿ ಎತ್ತುಗಳ ಸಾಗಾಣೆ | ಗಿಊP, ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ
ಅರಣ್ಯ ಇಲಾಖೆಯ ನಿವೃತ್ತ ನೌಕರರೊಬ್ಬರು ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಮಳೆ ಬಂದಾಗ ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗುತ್ತದೆ. ಸಾಕಷ್ಟು ಬಾರಿ ಹಳ್ಳದ ಏರಿಯಾ ನಿವಾಸಿಗಳು ರಾಜ ಕಾಲುವೆ ಒತ್ತುವರಿ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿಕ್ಕೂ ಮನವಿ ನೀಡಿದ್ದಾರೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
2022-23 ನೇ ಸಾಲಿನಲ್ಲಿಯೇ ಹಳ್ಳದ ಏರಿಯಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ ಎನ್ನುವುದು ಅಲ್ಲಿನ ನಿವಾಸಿಗಳ ಅಳಲು.
ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಮೂರೇ ದಿನದಲ್ಲಿ 1 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹ
ಈ ವೇಳೆ ಪರಿಸರ ಇಂಜಿನಿಯರ್ ಜಾಫರ್, ಬಾಳೆಕಾಯಿ ಶ್ರೀನಿವಾಸ್, ಸುಭಾನುಲ್ಲ ಸೇರಿದಂತೆ ಸಾರ್ವಜನಿಕರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
