ಮುಖ್ಯ ಸುದ್ದಿ
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ; ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿಗೆ ಆಹ್ವಾನ

ಚಿತ್ರದುರ್ಗ ನ್ಯೂಸ್.ಕಾಂ
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. 2024ರ ಜನವರಿ 22ರಂದು ಜನವರಿ 22ರಂದು ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಈರುಳ್ಳಿ ತುಂಬಿದ್ದ ಲಾರಿಗೆ ಕ್ಯಾಂಟರ್‌ಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ
ರಾಮಲಲ್ಲಾ ಮೂರ್ತಿಗೆ ಪ್ರಾಣಪ್ರತಿಷ್ಠಾನೆ ನೆರವೇರಿಸಿ, ಗರ್ಭಗುಡಿಯಲ್ಲಿ ಇರಿಸಿ ಪೂಜೆ ಮಾಡಲಾಗುತ್ತದೆ. ಈ ಭವ್ಯ ಕ್ಷಣಕ್ಕೆ 6 ಸಾವಿರ ಗಣ್ಯರು ಸಾಕ್ಷಿಯಾಗಲಿದ್ದು, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಿಂದ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಮುದ್ರಿಸಿ ದೇಶದ ಪ್ರಮುಖ ರಾಜಕಾರಣಿಗಳು, ಹಿಂದು ಸಂಘಟನೆಗಳ ಮುಖಂಡರು, ಸಾಧು-ಸಂತರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ.
ಇದನ್ನೂ ಓದಿ: ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ; ಅಯ್ಯೋಧೆಗೆ ಶ್ರೀಮಾದಾರ ಚನ್ನಯ್ಯ ಶ್ರೀಗಳಿಗೆ ಆಹ್ವಾನ
ಈಗಾಗಲೇ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠ ಮಾದಾರ ಚನ್ನಯ್ಯ ಸ್ವಾಮೀಜಿಗೆ ಆಹ್ವಾನ ಪತ್ರಿಕೆ ತಲುಪಿದ ಬೆನ್ನಲ್ಲೇ ಹೊಸದುರ್ಗದ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಅವರಿಗೂ ಆಹ್ವಾನ ಪತ್ರಿಕೆ ಬಂದಿದೆ.
ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮಮಂದಿರ ಲೋಕಾರ್ಪಣೆ ಸಮಾರಂಭಕ್ಕೆ ಶ್ರೀ ಜಗದ್ಗುರು ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೂಜ್ಯ ಶ್ರೀ ಶಾಂತವೀರ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿ ಅವಶ್ಯಕತೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಕಳಿಸಿರುವ ಆಹ್ವಾನ ಪತ್ರದಲ್ಲಿ ತಿಳಿಸಿದ್ದಾರೆ.
ಇದೊಂದು ಅವಿಸ್ಮರಣೀಯ ಸಮಾರಂಭವಾಗಿದ್ದು ಜಗತ್ತಿನಾದ್ಯಂತ ಅನೇಕ ಪ್ರಮುಖರು, ಭಕ್ತರು ಪವಿತ್ರ ರಾಮ ರಾಮಮಂದಿರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದ ಕಾರಣ ತಾವು ಈ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಪತ್ರ ಕಳಿಸಿಕೊಟ್ಟಿದ್ದಾರೆ.
ಕರ್ನಾಟಕದ ಮಠಾಧೀಶರ ತಂಡ ಕರ್ನಾಟಕದ ಹನುಮ ಮಂದಿರದ ಮೃತ್ಯುಕೆಯನ್ನು ರಾಮ ಮಂದಿರದ ಗರ್ಭಗುಡಿಯಲ್ಲಿ ಕರ್ನಾಟಕದ ಮಣ್ಣನ್ನು ಅರ್ಪಿಸಲಾಗಿತ್ತು. ಚಕ್ರವರ್ತಿ ಸೂಲಿಬೆಲೆ ಇವರ ನೇತೃತ್ವದಲ್ಲಿ ನಾವು ಸೇರಿದಂತೆ ಸುಮಾರು 15 ಪ್ರಮುಖ ಮಠಾಧೀಶರು ಶ್ರೀರಾಮ ಮಂದಿರದ ಕಾಮಗಾರಿ ವೀಕ್ಷಿಸಿ ಮೃತ್ತಿಗೆ ಸಮರ್ಪಿಸಿದ್ದೇವು ಎಂದು ಶಾಂತವೀರ ಸ್ವಾಮೀಜಿ ತಿಳಿಸಿದ್ದಾರೆ.
