
ಚಿತ್ರದುರ್ಗ ನ್ಯೂಸ್.ಕಾಂ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮಮಂದಿರದಲ್ಲಿ ಜ.22 ರಂದು ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗೆ ಆಹ್ವಾನ ನೀಡಲಾಗಿದೆ.
ಇದನ್ನೂ ಓದಿ: ಬೆಲಗೂರಿನಲ್ಲಿ ಹನುಮ ಜಯಂತಿ; ವಿಜಯ ಮಾರುತಿ ಶರ್ಮ ಸ್ವಾಮೀಜಿ

ರಾಮ ಜನ್ಮಭೂಮಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗೆ ಆಹ್ವಾನ ಪತ್ರಿಕೆ ಕಳುಹಿಸಿಕೊಟ್ಟಿದ್ದಾರೆ. ‘ಇದೊಂದು ಅವಿಸ್ಮರಣೀಯ ಸಮಾರಂಭವಾಗಿದ್ದು, ಜಗತ್ತಿನಾದ್ಯಂತ ಅನೇಕ ಪ್ರಮುಖರು, ಭಕ್ತರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ತಾವೂ ಈ ಸಮಾರಂಭದಲ್ಲಿ ಭಾಗವಹಿಸಬೇಕು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ; ಯುವಕನ ವಿರುದ್ಧ ಪೋಕ್ಸೊ ಕೇಸ್
ಈಗಾಗಲೇ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹಾಗೂ ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರಿಗೆ ಆಹ್ವಾನ ಪತ್ರವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಆಡಳಿತ ಮಂಡಳಿ ತಲುಪಿಸಿದೆ. ಈ ಹಿಂದೆ, ಕರ್ನಾಟಕದ ಮಠಾಧೀಶರ ತಂಡವು ಶ್ರೀರಾಮ ಮಂದಿರದ ಕಾಮಗಾರಿ ವೀಕ್ಷಿಸಿ, ಮೃತ್ತಿಕೆ ಸಮರ್ಪಿಸಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
