CHITRADURGA NEWS | 05 JUNE 2026
ಚಿತ್ರದುರ್ಗ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವ ರಾಮಲಿಂಗಾರೆಡ್ಡಿರವರು ಕೇಳಿದ ಖಾತೆ ನೀಡಲಿಲ್ಲವೆಂದು ಬೇಸತ್ತು ರಾಜೀನಾಮೆ ನೀಡಿರುವುದು ನಮಗೆಲ್ಲಾ ಮನಸ್ಸಿಗೆ ಅತೀವ ನೋವುಂಟಾಗಿದೆ ಎಂದು ಮಂಜುನಾಥ ರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದಲೂ ಪಕ್ಷಕ್ಕೆ ನಿಷ್ಟಾವಂತರಾಗಿರುವ ಹಿರಿಯ ಅನುಭವಿ ರಾಜಕಾರಣಿ
ರಾಮಲಿಂಗಾರೆಡ್ಡಿರವರು ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ ಸಾರಿಗೆ ಸಚಿವರಾಗಿದ್ದರು. ಈಗ ಬೆಂಗಳೂರು ನಗರಾಭಿವೃದ್ದಿ ಕೇಳಿದ್ದರು. ಅದಕ್ಕೆ ಬದಲಾಗಿ ಜಲಸಂಪನ್ಮೂಲ ಖಾತೆ ನೀಡಿರುವುದು ಅವರಿಗೆ ಸಮಾಧಾನವಾಗಿಲ್ಲ. ಅದಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ. ಹೈಕಮಾಂಡ್ ಇದನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.
ವಿಜಯಕುಮಾರ್ ರೆಡ್ಡಿ ಮಾತನಾಡಿ, ಸಚಿವ ರಾಮಲಿಂಗಾರೆಡ್ಡಿರವರು ಹಿಂದಿನಿಂದಲೂ ಕಾಂಗ್ರೆಸ್‍ನಲ್ಲಿಯೇ ಉಳಿದುಕೊಂಡಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಇವರಿಗೆ ಯಾವುದೆ ಕಪ್ಪು ಚುಕ್ಕೆ ಕಳಂಕವಿಲ್ಲ.
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ದೆಹಲಿಗೆ ಹೋಗಿ ನಾಯಕರುಗಳ ಬಳಿ ಲಾಭಿ ಮಾಡಿದವರಲ್ಲ. ನಗರಾಭಿವೃದ್ದಿ ಖಾತೆ ಸಿಗಲಿಲ್ಲವೆಂದು ಬೇಜಾರಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ವರಿಷ್ಟರು ಮತ್ತೊಮ್ಮೆ ಪರಾಮರ್ಶಿಸಲಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ಸುದ್ದಿಗೋಷ್ಠಿಯಲ್ಲಿ ಪುರುಷೋತ್ತಮ, ವೆಂಕಟೇಶ್‍ರೆಡ್ಡಿ, ರಾಜಣ್ಣ, ನಾಗರಾಜ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
