ಮುಖ್ಯ ಸುದ್ದಿ
KSRTC ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಂಗಮ್ಮ | 7.5 ಲಕ್ಷ ಪರಿಹಾರ ಕೊಡಲು ಒಪ್ಪಿಗೆ | ಜಿಲ್ಲಾ ನ್ಯಾಯಾಧೀಶರಿಂದ ಸಂಧಾನ ಯಶಸ್ವಿ
CHITRADURGA NEWS | 13 JULY 2024
ಚಿತತ್ರದುರ್ಗ: KSRTC ಬಸ್ ಅಪಘಾತದಲ್ಲಿ ಎಡಗಾಲಿನ ಪಾದವನ್ನೇ ಕಳೆದುಕೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾದ ಮಹಿಳೆಯೊಬ್ಬರು ಹೆಚ್ಚಿನ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ವರೆಗೆ ಹೋಗಿರುವ ಪ್ರಕರಣ ಇದಾಗಿದೆ.
ಇದನ್ನೂ ಓದಿ: ಜಗದೀಶ್, ರವೀಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ | ಪತ್ತೆಯಾದ ಆಸ್ತಿ ಎಷ್ಟು ಗೊತ್ತಾ ?
ಜಿಲ್ಲಾ ಹಂತದ ಸ್ಥಳೀಯ ನ್ಯಾಯಾಲಯ ಆದೇಶಿಸಿದ್ದ ಪರಿಹಾರ ಕಡಿಮೆಯಾಗಿದೆ ಎಂದು ಹೈಕೋರ್ಟ್ ನೀಡಿದ ಪರಿಹಾರಕ್ಕೂ ಬಗ್ಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಶೇಷ ಪ್ರಕರಣ ಇದಾಗಿದೆ.
ಏನಿದು ಕೆಎಸ್‍ಆರ್‍ಟಿಸಿ ವರ್ಸಸ್ ಬೊಗಳೇರಹಟ್ಟಿ ರಂಗಮ್ಮನ ಕೇಸ್:
ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಳೆದ 2018 ಸೆಪ್ಟೆಂಬರ್ 12 ರಂದು ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿದ್ದ ಚಿತ್ರದುರ್ಗ ತಾಲೂಕು ಬೊಗಳೇರಹಟ್ಟಿ ಗ್ರಾಮದ ರಂಗಮ್ಮ ಅವರ ಕಾಲಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತವಾಗಿದೆ.
ಇದನ್ನೂ ಓದಿ: ತಪ್ಪು ಮಾಹಿತಿ ನೀಡಬೇಡಿ | ಮೊದಲು ಆರ್‌ಒ ಪ್ಲಾಂಟ್ ದುರಸ್ತಿಗೊಳಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಖಡಕ್ ಸೂಚನೆ
ಕಾಲಿನ ಪಾದದ ಮೇಲೆ ಬಸ್ಸಿನ ಟೈಯರ್ ಹರಿದಿದ್ದರಿಂದ ರಂಗಮ್ಮ ಎಡ ಪಾದವನ್ನು ಕಳೆದುಕೊಂಡು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗಿದ್ದರು.
ಈ ಬಗ್ಗೆ ರಂಗಮ್ಮ ಚಿತ್ರದುರ್ಗ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಾದ ವಿವಾದ ಆಲಿಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಮಹಿಳೆಗೆ 2 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿತ್ತು.
ಇದನ್ನೂ ಓದಿ: ಚಿತ್ರದುರ್ಗದ ಜನಸಂಖ್ಯೆ ಎಷ್ಟು, ಕುಡಿಯಲು ಎಷ್ಟು ನೀರು ಕೊಡುತ್ತಿದ್ದೀರಿ | ಗೋವಿಂದ ಕಾರಜೋಳ ಪ್ರಶ್ನೆಗೆ ಇಂಜಿನಿಯರ್ ತಬ್ಬಿಬ್ಬು
ಈ ಆದೇಶದ ವಿರುದ್ಧ ರಂಗಮ್ಮ ಕರ್ನಾಟಕ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿ ಹೆಚ್ಚಿನ ಪರಿಹಾರಕ್ಕೆ ಮೊರೆಯಟ್ಟರು.
ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದಲ್ಲಿ ಬಾಧಿತ ಮಹಿಳೆಗೆ 4,51,990 ಪರಿಹಾರ ನೀಡಲು ಆದೇಶಿಸಿತ್ತು.
ಇದಕ್ಕೂ ಸಮಾಧಾನಪಟ್ಟುಕೊಳ್ಳದ ರಂಗಮ್ಮ, ಹೈಕೋರ್ಟ್ ಆದೇಶದ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಕೇಂದ್ರದಿಂದ 5300 ಕೋಟಿ ತಂದು ಸಮಗ್ರ ನೀರಾವರಿ ಯೋಜನೆ ರೂಪಿಸಲು ರೈತರ ಒತ್ತಾಯ
ಸರ್ವೋಚ್ಛ ನ್ಯಾಯಾಲಯ ಇದೇ ಜುಲೈ 29 ರಿಂದ ಆಗಸ್ಟ್ 03 ವರೆಗೆ ನಡೆಯಲಿರುವ ವಿಶೇಷ ಲೋಕ ಅದಾಲತ್‍ನಲ್ಲಿ ಪ್ರಕರಣ ಇತ್ಯರ್ಥಗೊಳಿಸಲು, ಪಕ್ಷಗಾರರ ನಡುವೆ ರಾಜಿ ಸಂಧಾನ ಮಾಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕಳುಹಿಸಿಕೊಟ್ಟಿತ್ತು.
ಅದರಂತೆ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಪಕ್ಷಗಾರರಿಗೆ ಶುಕ್ರವಾರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರೆಸಿ ರಾಜೀ ಸಂಧಾನಕ್ಕೆ ಮನ ಒಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಕಾಲೇಜು ಕಟ್ಟಡ ನಿರ್ಮಾಣ, ಮೂಲಭೂತ ಸೌಕರ್ಯ ಅಭಿವೃದ್ದಿಗೆ 2.24 ಎಕರೆ ಮಂಜೂರು | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದ ರಂಗಮ್ಮನಿಗೆ ಹೈಕೋರ್ಟ್ ಆದೇಶದಂತೆ 4,51,990 ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ 3 ಲಕ್ಷ ಸೇರಿ 7,51,990 ರೂ.ಗಳನ್ನು ನೀಡಲು ಸೂಚಿಸಲಾಯಿತು.
ಈ ಪರಿಹಾರ ಮೊತ್ತಕ್ಕೆ ಇಬ್ಬರೂ ಪಕ್ಷಗಾರರು ಒಪ್ಪಿಗೆ ಸೂಚಿಸಿ ರಾಜೀ ಸಂಧಾನ ಮೂಲಕ ವಿಶೇಷ ಲೋಕ ಅದಾಲತ್‍ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಜುಲೈ 12 ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ರಾಜೀ ಸಂಧಾನಕ್ಕೆ ಒಪ್ಪಿದ ರಂಗಮ್ಮ, ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಉಭಯ ಪಕ್ಷಗಾರರ ವಕೀಲರಿಗೆ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಧನ್ಯವಾದ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಸ್ಥಾಪನೆಯಾಗಿ 75 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಾಧೀಶರು ವಿಶೇಷ ಅಭಿಯಾನ ಕೈಗೊಂಡು ಅಲ್ಲಿ ವಿಚಾರಣೆ ನಡೆಯುತ್ತಿರುವ ದೇಶದ ಸುಮಾರು 13 ಸಾವಿರ ಪ್ರಕರಣಗಳನ್ನು ಜಿಲ್ಲೆ, ತಾಲೂಕುಗಳಿಗೆ ಕಳಿಸಿಕೊಟ್ಟಿದ್ದಾರೆ. ಮುತುವರ್ಜಿಯಿಂದ ಪ್ರಕರಣ ಇತ್ಯರ್ಥ ಮಾಡಲು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಿ ಸಂಧಾನದಲ್ಲಿ ಬಗೆಹರಿದಿದೆ.
| ರೋಣ ವಾಸುದೇವ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು.