ಕ್ರೈಂ ಸುದ್ದಿ
ಅಪ್ರಾಪ್ತೆಯ ಮೇಲೆ ಅತ್ಯಾಚಾರ | ಆರೋಪಿಗೆ 10 ವರ್ಷ ಜೈಲು ಶಿಕ್ಷೆ
CHITRADURGA NEWS | 08 FEBRUARY 2024
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಚಿತ್ರದುರ್ಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.
ಚಳ್ಳಕೆರೆ ತಾಲೂಕಿನ ಗ್ರಾಮವೊಂದರ ಆರೋಪಿ ಮಲ್ಲಿಕಾರ್ಜುನ ಶಿಕ್ಷೆಗೆ ಗುರಿಯಾದವನು.
ಇದನ್ನೂ ಓದಿ: ಕೋಟೆ ನಾಡಿಗೆ ಬರುತ್ತಿದ್ದಾ ಜಿಲ್ಲಾಧಿಕಾರಿ ದಿವ್ಯಪ್ರಭು
ಮದುವೆಯಾಗುವುದಾಗಿ ನಂಬಿಸಿ ಚಳ್ಳಕೆರೆ ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಎಚ್.ಎಂ.ಎಸ್. ಲೇಔಟ್ಗೆ ಕರೆದೊಯ್ದು ಆಗಾಗ ಬಲವಂತದಿಂದ ಅತ್ಯಾಚಾರ ಮಾಡಿದ್ದಾನೆ ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಆರ್.ಎಫ್.ದೇಸಾಯಿ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ಮದಕರಿ ನಾಯಕ ಪ್ರಶಸ್ತಿ
ಸದರಿ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಅಪರ ಜಿಲ್ಲಾ ನ್ಯಾಯಾಲಯ (ಪೋಕ್ಸೋ) ನ್ಯಾಯಾಧೀಶರಾದ ಬಿ.ಕೆ.ಕೋಮಲ ಆರೋಪಿ ಮಲ್ಲಿಕಾರ್ಜುನನಿಗೆ 10 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದ ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ಮತ್ತು ದಂಡದ ಮೊತ್ತ 50 ಸಾವಿರ ರೂ. ನೀಡಲು ಆದೇಶಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪೋಕ್ಸೋ ಪ್ರಕರಣಗಳ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.