
CHITRADURGA NEWS | 04 July 2025
ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪರಾಧಿ ಬತ್ತಯ್ಯನಹಟ್ಟಿ ಪುನೀತ್ ಕುಮಾರ್ ಶಿಕ್ಷೆಗೊಳಗಾಗಿದ್ದಾನೆ.
2023 ಮೇ 2 ರಂದು ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸ್ ಇನ್ಸ್ಪೆಕ್ಟರ್ ಸಮೀವುಲ್ಲಾ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಚಿತ್ರದುರ್ಗ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅಪರಾಧಿಗೆ 30 ಸಾವಿರ ದಂಡ, 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ನೊಂದ ಬಾಲಕಿಗೆ 4 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.
Also Read: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ | ಚಿತ್ರದುರ್ಗ ತಾಲೂಕಿಗೆ ಪದಾಧಿಕಾರಿಗಳ ಆಯ್ಕೆ
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.
ಪ್ರಕರಣದಲ್ಲಿ ಪೊಲೀಸ್ ಪೇದೆ ಎಂ.ಜಿ.ರಾಘವೇಂದ್ರ ಸಕಾಲಕ್ಕೆ ಸಾಕ್ಷಿಗಳನ್ನು ಹಾಜರುಪಡಿಸಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
