
CHITRADURGA NEWS | 15 JULY 2025
ಚಿತ್ರದುರ್ಗ: ಜುಲೈ 17 ರಂದು ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ಪ್ರದೇಶಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರ ನೇತೃತ್ವದ ತಂಡವು ಭೇಟಿ ನೀಡಲಿದೆ.
ಇದನ್ನೂ ಓದಿ: ಗ್ರಾಮಾಂತರ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
ತುಮಕೂರು ಜಿಲ್ಲೆಯಲ್ಲಿನ ಗಣಿಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿರುವ ತಂಡವು, ನಂತರ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಈ ಸಂದರ್ಭದಲ್ಲಿ ಗಣಿಗಾರಿಕಾ ಪ್ರದೇಶಗಳಿಗೆ ಹಾಗೂ ಸುತ್ತಲಿನ ಕೆಲವು ಹಳ್ಳಿಗಳಿಗೆ ಭೇಟಿ ನೀಡಿ ಗಣಿಗಾರಿಕೆಯಿಂದ ಆಗಿರುವ ಅನಾಹುತಗಳು, ಅದರಿಂದ ಜನರಿಗಾಗುತ್ತಿರುವ ತೊಂದರೆಗಳು ಮತ್ತು ಈ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಯೋಜನೆಗಳ ಪರಿಶೀಲನೆ ನಡೆಸಲಿದ್ದಾರೆ.
ಇದನ್ನೂ ಓದಿ: ಪ್ರತಿಭಾ ಪುರಸ್ಕಾರಕ್ಕೆ ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಈ ಭೇಟಿಯ ಸಂದರ್ಭದಲ್ಲಿ ಭಾದಿತ ಜನರು, ಸಮಸ್ಯೆ ಎದುರಿಸುತ್ತಿರುವವರು ಅಥವಾ ಈ ಪ್ರಯತ್ನದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರವಿ ಕೃಷ್ಣಾರೆಡ್ಡಿ ಅವರನ್ನು ಭೇಟಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಿ.ಮಹೇಶ್ ನಗರಂಗೆರೆ 7892600106, ಬಾಲರಾಜ 98445 20654 ಸಂಪರ್ಕಿಸಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
