CHITRADURGA NEWS | 14 August 2026
ಚಿತ್ರದುರ್ಗ: ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ಜಿಲ್ಲಾ ಘಟಕದ ಪಕ್ಷದ ಸಂಘಟನೆಗೆ ಬಲ ತುಂಬುವ ನಿಟ್ಟಿನಲ್ಲಿ ಬ್ಯಾಲಹಳ್ಳಿಯ ರವಿಕುಮಾರ್.ಎನ್ ಅವರನ್ನು ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ನೇಮಕಾತಿ ಆದೇಶದಲ್ಲಿ, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಜಿಲ್ಲಾ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವುದು, ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಅವರ ಅನುಭವ, ಪರಿಶ್ರಮ ಹಾಗೂ ಸಂಘಟನಾ ಸಾಮರ್ಥ್ಯದಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವ ವಿಶ್ವಾಸವಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

