CHITRADURGA NEWS | 18 APRIL 2024
ಚಿತ್ರದುರ್ಗ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

ಇದನ್ನೂ ಓದಿ: ರಾಹುಲ್ ನೈತಿಕತೆಯಿಲ್ಲ | ವಿಧಾನ ಪರಿಷತ್ ಸದಸ್ಯ ಎನ್.ಆರ್.ರವಿಕುಮಾರ್
ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಕೆರೆ ಹೂಳು ತೆಗೆಯುವ ಕಾಮಗಾರಿ ವೀಕ್ಷಣೆ ಮಾಡಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಲಕ್ಕಿಹಳ್ಳಿ ಗ್ರಾಮದ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾಮಗಾರಿಗಳನ್ನೂ ಸಹ ವೀಕ್ಷಣೆ ಮಾಡಿದರು.
ಇದನ್ನೂ ಓದಿ: ದುರ್ಗದಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಉಪಕಾರ್ಯದರ್ಶಿ ಟಿ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಹೊಸದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
