CHITRADURGA NEWS | 19 AUGUST 2024
ಚಿತ್ರದುರ್ಗ: ಎಂತಹ ಹೋರಾಟ ತ್ಯಾಗಕ್ಕೂ ಸಿದ್ದರಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಡಿ.ಸುಧಾಕರ್ ಎಚ್ಚರಿಸಿದರು.
ಕ್ಲಿಕ್ ಮಾಡಿ ಓದಿ: Revision; ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ | ಆಗಸ್ಟ್ 20 ರಿಂದ ಆರಂಭ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್(CONGRESS)ನಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ(Massive protest) ನಡೆಸಲಾಯಿತು.
ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ನಂತರ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಯಾವುದೇ ತಪ್ಪಿಲ್ಲದಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಡಾ ಹಗರಣದಲ್ಲಿ ಸಿಲುಕಿಸಿ ಬಿಜೆಪಿಯವರು ಮಸಿ ಬಳಿಯುವ ಕುತಂತ್ರ ಮಾಡುತ್ತಿರುವುದು ಖಂಡನೀಯ.
1998 ರಲ್ಲಿ ಮುಡಾದಲ್ಲಿ ನಿವೇಶನ ಪಡೆದಿದ್ದಾರೆನ್ನುವುದನ್ನು ಈಗ ಕೆದಕುತ್ತಿರುವ ಬಿಜೆಪಿ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸುವ ಕೃತ್ಯ ನಡೆಸುತ್ತಿದೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿರುವುದು ಕೋಮುವಾದಿ ಬಿಜೆಪಿಗೆ ಮುಖಭಂಗವಾಗಿರುವುದರಿಂದ ಇಂತಹ ಕ್ಯಾತೆ ಮಾಡುತ್ತಿದೆ.
ಕ್ಲಿಕ್ ಮಾಡಿ ಓದಿ:MUDA: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು
ಸತ್ಯ ಎಂದಿಗೂ ಸೋಲಲ್ಲ. ಇಡೀ ಸಚಿವ ಸಂಪುಟ ಸಿದ್ದರಾಮಯ್ಯನವರ ಬೆನ್ನಿಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು ಶೋಷಿತರ ನ್ಯಾಯದ ಪರವಾಗಿರುವ ಸಿದ್ದರಾಮಯ್ಯನವರಿಗೆ ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದು ಸಂವಿಧಾನದಡಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ.
ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು. ರಾಜ್ಯದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದೆ. ಯಾರು ತಾಳ್ಮೆ ಕಳೆದುಕೊಳ್ಳುವುದು ಬೇಡ. ಹಿಂಸಾತ್ಮಕ ಮಾರ್ಗದಲ್ಲಿ ನಡೆಯಬಾರದು. ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ. ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.
ಬಿಜೆಪಿ ಅಕ್ರಮವನ್ನು ಯಾರು ಪ್ರಶ್ನಿಸುತ್ತಾರೋ ಅವರ ಮೇಲೆ ಧಾಳಿ ನಡೆಸುವ ಪರಿಪಾಠ ಬೆಳೆಸಿಕೊಂಡಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ ಎಂದು ಗುಡುಗಿದರು.
ರಾಜ್ಯದಲ್ಲಿರುವ ಜನಪರ ಆಡಳಿತಕ್ಕೆ ಬಿಜೆಪಿ ಮಸಿ ಬಳಿಯುತ್ತಿದೆ. ನಲವತ್ತು ಪರ್ಸೆಂಟ್ ಭ್ರಷ್ಠಾಚಾರವೆಸಗಿ ಜನರಿಂದ ಛೀ ಥೂ ಎನ್ನಿಸಿಕೊಂಡಿರುವ ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರ ಹಿಡಿಯುವುದರಲ್ಲಿ ನಿಸ್ಸೀಮರು.
ಕ್ಲಿಕ್ ಮಾಡಿ ಓದಿ: ABVP protest: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹ
ಮುಡಾದಲ್ಲಿ ಯಾವುದೇ ಅಕ್ರಮ ಎಸಗಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎದೆಗುಂದುವುದು ಬೇಡ. ಸಿ.ಎಂ.ಪತ್ನಿಗೆ ಅವರ ಸಹೋದರರು ಉಡುಗೊರೆಯಾಗಿ ನೀಡಿರುವ ಜಮೀನಿನಲ್ಲಿ ಪ್ರಾಧಿಕಾರದ ನಿಯಮದಂತೆ ನಿವೇಶನ ಪಡೆದುಕೊಂಡಿದ್ದಾರೆ. ಕಪ್ಪುಚುಕ್ಕೆ ಇಲ್ಲದೆ ದಕ್ಷ ಆಡಳಿತ ನಡೆಸುತ್ತಿರುವುದನ್ನು ಅರಗಿಸಿಕೊಳ್ಳಲು ಆಗದ ಬಿಜೆಪಿಯವರು ಇಲ್ಲ ಸಲ್ಲದ ಆಪಾದನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಶಾಸಕರುಗಳಾದ ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರುಗಳಾದ ಆರ್.ಕೆ.ಸರ್ದಾರ್, ಬಿ.ಟಿ.ಜಗದೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಪದಾಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
