Connect with us

    ಬೆಳೆ ಹಾನಿ ಪರಿಶೀಲನೆ, ಪರಿಹಾರಕ್ಕೆ ಶಾಶ್ವತ ಕೋಶ ರಚಿಸಿ | ರೈತ ಸಂಘ ಆಗ್ರಹ

    Farmers Association

    ಮುಖ್ಯ ಸುದ್ದಿ

    ಬೆಳೆ ಹಾನಿ ಪರಿಶೀಲನೆ, ಪರಿಹಾರಕ್ಕೆ ಶಾಶ್ವತ ಕೋಶ ರಚಿಸಿ | ರೈತ ಸಂಘ ಆಗ್ರಹ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 10 JANUARY 2025

    ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಶಾಶ್ವತ ಬರ ಪೀಡಿತ ಪ್ರದೇಶವಾಗಿದ್ದು, ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದೆ. ಹವಾಮಾನ ವೈಪರಿತ್ಯಗಳು ರೈತರ ಬದುಕಿನ ಮೇಲೆ ಹೆಚ್ಚು ಪರಿಣಾಮ ಬರುತ್ತವೆ. ಬೆಳೆ ಹಾನಿ ಪರಿಶೀಲನೆ ಹಾಗೂ ನಷ್ಟ ಅಂದಾಜಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶವೊಂದನ್ನು ರಚಿಸುವ ತುರ್ತು ಅಗತ್ಯವಿದೆ ಎಂದು ಸರ್ಕಾರವನ್ನು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.

    Also Read: ವಿವಿ ಸಾಗರ ಜಲಾಶಯ ಭರ್ತಿ | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

    ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆ ಶಾಶ್ವತ ಬರ ಪೀಡಿತ ಪ್ರದೇಶವಾಗಿದ್ದು ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದಾರೆ.

    ಒಮ್ಮೆ ಅತಿವೃಷ್ಟಿ ಮತ್ತೊಮ್ಮೆ ಅನಾವೃಷ್ಟಿ ಇಲ್ಲಿ ಮಾಮೂಲು, ಹವಾಮಾನ ವೈಪರಿತ್ಯಗಳು ರೈತರ ಬದುಕಿನ ಮೇಲೆ ಹೆಚ್ಚು ಪರಿಣಾಮ ಬರುತ್ತವೆ. ಹಾಗಾಗಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಶ್ವತ ವೇದಿಕೆ ಒದಗಿಸುವುದು ಅನಿವಾರ್ಯ ಬೆಳೆ ಹಾನಿ ಪರಿಶೀಲನೆ ಹಾಗೂ ನಷ್ಟ ಅಂದಾಜಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶವೊಂದನ್ನು ರಚಿಸುವ ತುರ್ತು ಅಗತ್ಯವಿದೆ ಎಂದು ಆಗ್ರಹಿಸಿದರು.

    ಈ ಕೋಶದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ. ವಿಮಾ ಕಂಪನಿ ಅಧಿಕಾರಿಗಳು ಇರಬೇಕು. ಇದಕ್ಕಾಗಿ ಪ್ರತ್ಯೇಕ ಕಚೇರಿ ತೆರೆದು ಮುಂಗಾರು ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿ ಆದಾಗ ಕೋಶವು ಕಾರ್ಯ ಪಡೆ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು.

    Also Read: 73 ಪ್ರಕರಣಗಳ ವಿಚಾರಣೆ | ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ 

    ರೈತರಿಂದ ಬಂದ ದೂರುಗಳ ಆಲಿಸಿ ತಕ್ಷಣ ಜಮೀನುಗಳಿಗೆ ಹೋಗಬೇಕು. ಅಲ್ಲದೇ ತಮ್ಮದೇ ಆದ ನೆಟ್‌ವರ್ಕ್ ಮೂಲಕ ಬೆಳೆ ನಷ್ಟ ಅಂದಾಜಿಸುವ ಪರಿಪಾಟು ಇರಬೇಕು. ಸಹಾಯ ವಾಣಿ ಕಾರ್ಯನಿರ್ವಹಸಬೇಕು ಎಂದು ಒತ್ತಾಯಿಸಿದರು.

    ಜಿಲ್ಲೆಯಲ್ಲಿ ಈ ವರ್ಷ ಮಳೆ ಜಾಸ್ತಿಯಾಗಿ ಈರುಳ್ಳಿ ಕೊಳೆತು ಹೋಗಿದೆ. ಈರುಳ್ಳಿ ಬೆಳೆ ನಾಶವನ್ನು ಖುದ್ದು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆಗಮಿಸಿದ್ದರು.

    ಅಲ್ಲದೇ ಕಳಪೆ ಬಿತ್ತನೆ ಬೀಜ ವಿತರಣೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬಿತ್ತನೆ ಮಾಡಲಾದ ತೊಗರಿ ಹೂ ಬಿಟ್ಟು ಕಾಯಿ ಕಟ್ಟದೆ ಹಾಗೆ ಉಳಿದಿದೆ. ಪರಿಣಾಮ ರೈತ ನಷ್ಟ ಅನುಭವಿಸುವಂತಾಗಿದೆ. ಬೆಳೆ ನಷ್ಟ ಪರಿಹಾರ ವಿತರಣೆ ಸಂಬ0ಧ ರೈತ ಸಂಘಟನೆಗಳು ಈಗಾಗಲೇ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

    ಪರಿಹಾರ ವಿತರಣೆಯಲ್ಲಿನ ತಾಂತ್ರಿಕ ಲೋಪ ಹಾಗೂ ತಪ್ಪು ನಡೆಯಿಂದಾಗಿ ಬಹಳಷ್ಟು ರೈತರಿಗೆ ಪರಿಹಾರ ವಿತರಣೆಯಾಗಿಲ್ಲ. ರೈತರು ನಿತ್ಯ ಬ್ಯಾಂಕ್ ಖಾತೆ ಪರಿಶೀಲಿಸಿ ಸುಸ್ತಾಗಿದ್ದಾರೆ. ಅಧಿಕಾರಿಗಳ ಮಟ್ಟದಲ್ಲಿ ಆದ ಲೋಪದಿಂದಾಗಿ ಪರಿಹಾರ ವಿತರಣೆಯಾಗಿಲ್ಲ.

    Also Read: ಅಡಿಕೆ ಧಾರಣೆ | ರಾಜ್ಯದ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ರೇಟ್

    ಜಿಲ್ಲಾಡಳಿತ ತಕ್ಷಣವೇ ಬೆಳೆ ನಷ್ಟದ ಬಗ್ಗೆ ಪುನರ್ ಪರಿಶೀಲಿಸಿ ತಕ್ಷಣವೇ ಪರಿಹಾರ ವಿತರಿಸಬೇಕು. ಯಾರೊಬ್ಬ ರೈತರೂ ಬೆಳೆ ನಷ್ಟ ಪರಿಹಾರ ವ್ಯಾಪ್ತಿಯು ಹೊರಗಿರದಂತೆ ನೋಡಿಕೊಳ್ಳಬೇಕು. ಬೆಸ್ಕಾಂನವರು ನಿತ್ಯ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿ ಕೆಲವು ಕಡೆ ಆರು ತಾಸು ವಿತರಿಸುತ್ತಿದ್ದಾರೆ.

    ಇದರಿಂದಾಗಿ ಬೇಸಿಗೆ ಫಸಲು ಬೆಳೆಯಲು ತೊಂದರೆಯಾಗಿದೆ. ತಕ್ಷಣವೇ ಏಳು ತಾಸು ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳಬೇಕು. ಯಾವುದೇ ಕಾರಣದಿಂದ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಬಾರದು ಎಂದು ತಾಕೀತು ಮಾಡಿದರು.

    ರಾಜ್ಯ ಉಪಾಧ್ಯಕ್ಷ ಹೊರಕೇರಪ್ಪ, ಜಿಲ್ಲಾಧ್ಯಕ್ಷ ಧನಂಜಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಯುವ ತಾಲ್ಲೂಕು ಅಧ್ಯಕ್ಷ ಚೇತನ ಯಳನಾಡು, ಉಪಾಧ್ಯಕ್ಷ ಲಕ್ಷೀಕಾಂತ ಭೂತಯ್ಯ ಇತರರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top