CHITRADURGA NEWS | 07 JULY 2024
ಚಿತ್ರದುರ್ಗ: ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು, ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್ ಹೋಂನ ತಜ್ಞ ವೈದ್ಯೆ ಡಾ.ಸೌಮ್ಯ ಆಯ್ಕೆಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ಭ್ರೂಣಲಿಂಗ ಪತ್ತೆ ಮಾಹಿತಿದಾರರಿಗೆ ₹ 1 ಲಕ್ಷ ಬಹುಮಾನ | ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್
ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಸಮಿತಿಯನ್ನು ಪುನರ್ ರಚಿಸಲಾಗಿದೆ. ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸದಸ್ಯರಾಗಿ ಡಾ.ದೇವರಾಜು, ಡಾ.ಸತ್ಯನಾರಾಯಣ, ಕಾನೂನು ಸಲಹೆಗಾರರಾಗಿ ವಕೀಲ ಉಮೇಶ್, ಸರ್ಕಾರೇತರ ಸ್ವಯಂ ಸೇವಾ ಸಂಘದ ಮೀನಾಕ್ಷಿ, ಗಾಯಿತ್ರಿ ಶಿವರಾಂ, ಜಿ.ಎಸ್.ಗೌಡ ಸೇರಿದಂತೆ ಜಿಲ್ಲಾ ವಾರ್ತಾಧಿಕಾರಿ, ಸರ್ಕಾರಿ ಅಭಿಯೋಜಕರು ಕಾರ್ಯನಿರ್ವಹಿಸಲಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
