
CHITRADURGA NEWS | 14 NOVEMBER 2025
ಚಿತ್ರದುರ್ಗ: ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗುವ ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಜಿಲ್ಲಾ ಸೈನಿಕ ಮಂಡಳಿಯ ಪುನರ್‍ರಚನೆಗೆ ಪ್ರತಿ ಜಿಲ್ಲೆಯಿಂದ ಓರ್ವ ಮಾಜಿ ಸೈನಿಕರು ಅಧಿಕಾರೇತರ ಸದಸ್ಯರಾಗಿ ಪ್ರತಿನಿಧಿಸಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ | ಶಾಂತವೀರ ಶ್ರೀ ಸಂತಾಪ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ ಭತ್ಯೆ ರಹಿತವಾಗಿ ಸ್ವಇಚ್ಚೆಯಿಂದ ಕಾರ್ಯ ನಿರ್ವಹಿಸಲು ಆಸಕ್ತರು ಇದೇ ನ. 15 ರೊಳಗಾಗಿ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಶಿವಮೊಗ್ಗ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಕರೆ ಮಾಡುವಂತೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
