
CHITRADURGA NEWS | 18 JULY 2025
ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರೀಕಲ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 21 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಬೋನಿಗೆ ಬಿದ್ದ ಚಿರತೆ | ಆಡುಮಲ್ಲೇಶ್ವರ ಮೃಗಾಲಯದಲ್ಲಿ ಚಿಕಿತ್ಸೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 30 ವರ್ಷಗಳು (ಎಸ್.ಸಿ./ಎಸ್.ಟಿ./ಒ.ಬಿ.ಸಿ/ಇ.ಎಸ್.ಎಮ್) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 2025ರ ಅಕ್ಟೋಬರ್‍ನಲ್ಲಿ ಪರೀಕ್ಷೆ ನಡೆಯಲಿದೆ. ನಿಖರ ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಸ್.ಎಸ್.ಸಿ ವೆಬ್‍ಸೈಟ್ www.ssckkr.kar.nic.in / https://ssc.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
