CHITRADURGA NEWS | 28 MAY 2026
ಚಿತ್ರದುರ್ಗ: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮೇ 29 ರಿಂದ ಜೂನ್ 6 ರವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ವತಿಯಿಂದ ನಡೆಯುವ ಈ ಸಂದರ್ಶನವು ನಿಗದಿಪಡಿಸಿದ ದಿನಾಂಕಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಗಾಂಧಿ ನಗರದ, ಕಾಳಿದಾಸ ರಸ್ತೆಯಲ್ಲಿರುವ (ಮಹಾ ಬೋಧಿ ಸೊಸೈಟಿ ಪಕ್ಕ, ಫ್ರೀಡಂ ಪಾರ್ಕ್) ‘ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಕಾಡೆಮಿ’ಯಲ್ಲಿ ನಡೆಯಲಿದೆ.
ಆಸಕ್ತ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಹಾಗೂ ಸೇನಾ ಸೇವಾ ನಿವೃತ್ತಿ ಪುಸ್ತಕಗಳೊಂದಿಗೆ ಉಪ ನಿರ್ದೇಶಕರು ಹಾಗೂ ಬಂದೀಖಾನೆಗಳ ಮುಖ್ಯ ಅಧೀಕ್ಷಕರಾದ ಪಿ.ಎಸ್. ರಮೇಶ್ ಅವರನ್ನು ಸಂಪರ್ಕಿಸಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ರವೀಂದ್ರ ಅಮಾನತು
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632496560 ಅಥವಾ 9480806400 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
