CHITRADURGA NEWS | 26 DECEMBER 2025
ಚಿತ್ರದುರ್ಗ: ನಗರದ ಕಮ್ಮರೆಡ್ಡಿ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯು ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರರಾದ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಸಮಯದಾಯದ ಗೌರವಾನ್ವಿತರಿಗೆ ಸಾರ್ಥಕ ಸೇವಾ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ | ತಾಯಿ ಮಗು ಸೇರಿ 6 ಮಂದಿ ದಹನ
ಅಭಿನಂದನಾ ಸಮಾರಂಭವನ್ನು ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ಉಪಾಧ್ಯಕ್ಷ ಎಂ.ಕೆ.ಆನಂತರೆಡ್ಡಿ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆ ಗುರುತಿಸಿ ಅದಕ್ಕೆ ಪ್ರೋತ್ಸಾಹ ನೀಡುವುದು ಸಮುದಾಯ, ಪೋಷಕರ ಸಂಘ ಸಂಸ್ಥೆಗಳ ಹಾಗೂ ಶಿಕ್ಷಕರ ಕರ್ತವ್ಯವಾದಾಗ ಮಾತ್ರ ಮಕ್ಕಳು ಜೀವನದಲ್ಲಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.
ಎಲ್ಲಾ ಮಕ್ಕಳಲ್ಲಿ ಪ್ರತಿಭೆ ಎನ್ನುವುದು ಇರುತ್ತದೆ, ಅದರೆ ಅದನ್ನು ಪತ್ತೇ ಮಾಡುವ ಕೆಲಸವಾಗಬಾಗಬೇಕಿದೆ. ಅದು ಆದಾಗ ಮಾತ್ರ ಮಕ್ಕಳ ಪ್ರತಿಭೆಗೆ ಮನ್ನಣೆ ಸಿಗುತ್ತದೆ. ಇದೇ ರೀತಿ ಮಕ್ಕಳ ಪ್ರತೀಬೆಯನ್ನು ಗುರುತಿಸಿ ಅದಕ್ಕೆ ತಕ್ಕನಾದ ರೀತಿಯ ಪ್ರೋತ್ಸಾಹ ದೂರಕುವಂತಾಗಬೇಕಿದೆ ಎಂದರು.
ಜಿಲ್ಲಾ ರೆಡ್ಡಿ ಜನ ಸಂಘದ ಕಾರ್ಯದರ್ಶಿಯಾದ ಡಿ.ಕೆ.ಶೀಲಾ ಮಾತನಾಡಿ, ನಮ್ಮ ಸಂಘದ ವತಿಯಿಂದ ಸಮುದಾಯ ಮಕ್ಕಳಿಗೆ ವಸತಿ ನಿಲಯ ಸ್ಥಾಪನೆಯಾಗುವುದಕ್ಕಿಂತ ಮುಂಚೆ ಶಿಕ್ಷಣವನ್ನು ಪಡೆಯುವುದು ತುಂಬಾ ಕಷ್ಟವಾಗಿತ್ತು. ಗ್ರಾಮಾಂತರ ಪ್ರದೇಶದಿಂದ ಬರುವಂತ ಸಮುದಾಯದ ಮಕ್ಕಳಿಗೆ ಇರಲು ಜಾಗ ಇಲ್ಲದೆ ಶಿಕ್ಷಣವನ್ನೇ ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದನ್ನೂ ಓದಿ: ಬಸ್‌ಗೆ ಬೆಂಕಿ | ಅಪಘಾತ ಸಂಭವಿಸಿದ್ದು ಹೇಗೆ ಗೊತ್ತಾ ?
ಇದನ್ನು ಮನಗಂಡ ನಮ್ಮ ಹಿರಿಯರು 1916ರಲ್ಲಿ ಚಿತ್ರದುರ್ಗದಲ್ಲಿ ನಮ್ಮ ಸಮುದಾಯದ ಸಂಘವನ್ನು ಸ್ಥಾಪನೆ ಮಾಡಲು ನಿರ್ಧಾರ ಮಾಡಿ. ಜನತೆಯಿಂದ ಹಣವನ್ನು ಸಂಗ್ರಹ ಮಾಡಿ. 1932ರಲ್ಲಿ ಸಂಘವನ್ನು ಸ್ಥಾಪನೆ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ. ವಸತಿ ನಿಲಯಗಳನ್ನು ಸ್ಥಾಪನೆ ಮಾಡುವುದರ ಮೂಲಕ ನಿರ್ಮಾಣ ಮಾಡಲಾಯಿತು.
ತದ ನಂತರ ಸರ್ಕಾರಗಳು ವಸತಿ ನಿಲಯಗಳನ್ನು ಸ್ಥಾಪನೆ ಮಾಡಿದ್ದರಿಂದ ನಮ್ಮ ಸಮುದಾಯದ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದರಿಂದ ಈಗ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ಪ್ರೋತ್ಸಾಹ ನೀಡುವಂತಹ ಕಾರ್ಯವನ್ನು ಸಂಘದ ವತಿಯಿಂದ ಮಾಡಲಾಗುತ್ತಿದೆ. 2023-24ನೇ ವರ್ಷದಲ್ಲಿ 273 ಮಕ್ಕಳಿಗೆ 57 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದರು.
2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ 58 ಮತ್ತು ದ್ವಿತೀಯ ಪಿಯುಸಿ ಯಲ್ಲೂ ಉತ್ತೀರ್ಣರಾದ 106 ವಿದ್ಯಾಥಿಗಳನ್ನು ಗೌರವಿಸಲಾಯಿತು.
ಇದೇ ರೀತಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಸಮಯದಾಯದ 26 ಜನ ಗೌರವಾನ್ವಿತರಿಗೆ ಸಾರ್ಥಕ ಸೇವಾ ಅಭಿನಂದನೆ ಸಲ್ಲಿಸಲಾಯಿತು.
ಇದನ್ನೂ ಓದಿ: ಬಸ್ ಗೆ ಬೆಂಕಿ | ಗಾಯಾಳುಗಳನ್ನು ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ | ಸೂಕ್ತ ಚಿಕಿತ್ಸೆಗೆ ಸೂಚನೆ
ಜಿಲ್ಲಾ ರೆಡ್ಡಿ ಜನ ಸಂಘದ ಕಾರ್ಯದರ್ಶಿ ಜೆ.ಪರಶುರಾಮ್, ಖಂಜಾಚಿ ಜಿ.ವೈ.ಸುರೇಶ್ ಕುಮಾರ್ ಜಿ.ವೈ. ಡಾ.ಸಿದ್ದಾರ್ಥ ಗುಡಾರ್ಪಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ.ಕಂಠೀರವ ಬಾಲ ಸರಸ್ವತಿ, ಡಾ.ಎಸ್.ಸದಾಶಿವರೆಡ್ಡಿ, ಕೆ.ವಿ.ರಾಮಕೃಷ್ಣ, ವಿ.ಆರ್.ಮಂಜುನಾಥ್, ಕೆ.ಹೆಚ್.ಸುದರ್ಶನ ರೆಡ್ಡಿ, ಪಿ.ಚಂದ್ರರೆಡ್ಡಿ ಡಾ.ಪಿ.ಟಿ ಚಂದ್ರಹಾಸ್, ಡಾ.ಕೆ.ಜಿ.ರಾಘವರೆಡ್ಡಿ, ಎಸ್.ನಾಗರಾಜ್ ಸೇರಿದಂತೆ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರು ಮಹಾಸಭೆಯನ್ನು ನಡೆಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
