CHITRADURGA NEWS | 21 November 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಮ್ಮ ಪಾಲಿನ ಇನ್ನೂ 2 TMC ನೀರು ಹರಿಸಲು ಆದೇಶ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ರಘುಮೂರ್ತಿ ಮನವಿ ಮಾಡಿದರು.
ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತ ರೈತರಿಗೆ ಎರಡು ದಿನಗಳ ತರಬೇತಿ
ಹಿರಿಯೂರಿನಲ್ಲಿ ನಡೆದ ಪ್ರಜಾಸೇವಾ ಇಲಾಖೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಗೆ 29.9 TMC ನೀರು ಹಂಚಿಕೆಯಾಗಿದೆ. ಇದರಲ್ಲಿ ಭದ್ರಾ ಜಲಾಶಯದಿಂದ 12.5 TMC ನೀರಿದೆ. ಭದ್ರಾದಲ್ಲಿ 72 TMC ನೀರಿದ್ದಾಗ ಶೇ.18 ರಷ್ಟು ನೀರು ಕೊಡಬೇಕು.
ಈಗಾಗಲೇ 4 TMC ನೀರು ಪ್ರಾಯೋಗಿಕವಾಗಿ ಹರಿದು ಬಂದಿದ್ದು, ಉಳಿದ 2 TMC ನೀರು ಬಿಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಮನವಿ ಮಾಡಿದರು.
ಈಗಾಗಲೇ ದಾವಣಗೆರೆ, ಶಿವಮೊಗ್ಗ ಭಾಗದಲ್ಲಿ ವಿರೋಧ ವ್ಯಕ್ತವಾಗಿದೆ. ನೀರಿನ ಹಂಚಿಕೆಯಾಗಿ 15 ವರ್ಷವಾಗಿದೆ. ಇಷ್ಡು ದಿನ ನಮ್ಮ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಬೆಸ್ಕಾಂ ನಿರ್ವಹಣಾ ಕಾರ್ಯ | ಚಿತ್ರದುರ್ಗ ಸುತ್ತಮುತ್ತ ವಿದ್ಯುತ್ ಕಡಿತ
ಈ ವರ್ಷ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಉದ್ದೇಶಕ್ಕೆ ಕೆರೆಗಳಿಗೆ ನೀರು ತುಂಬಿಸಲು 2 TMC ಹರಿಸಬೇಕು ಎಂದು ಸಚಿವ ರಘುಮೂರ್ತಿ ಒತ್ತಾಯಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

