CHITRADURGA NEWS | 14 AUGUST 2026
ಚಿತ್ರದುರ್ಗ: ಮಹಾತ್ಮರು ಹಾಗೂ ಪುಣ್ಯಪುರುಷರನ್ನು ಸ್ಮರಿಸುವುದರಿಂದ ಜೀವನದಲ್ಲಿ ಸಾರ್ಥಕತೆ ದೊರೆಯುತ್ತದೆ. ಮಹಾತ್ಮರನ್ನು ನೆನೆಯುವುದು ಮುಕ್ತಿಗೆ ದಾರಿ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಡಾ. ಬಸವಕುಮಾರ ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಮೂಲಕರ್ತೃ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ ಶ್ರಾವಣಮಾಸದ ಅಂಗವಾಗಿ ಆಯೋಜಿಸಿದ್ದ ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೂನ್ಯಪೀಠ ಪರಂಪರೆಯ ಚಿತ್ರದುರ್ಗ ಬೃಹನ್ಮಠಕ್ಕೆ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು ನೆಲೆಸಿದ ನಂತರ ತನ್ನದೇ ಆದ ವಿಶಿಷ್ಟ ಪ್ರಭಾವ ದೊರೆಯಿತು. ಅವರು ಆಧ್ಯಾತ್ಮಿಕ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗದೆ ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲೂ ಮಹತ್ವದ ಕೊಡುಗೆ ನೀಡಿದರು. ಅವರ ಸಾಧನೆಗೆ ಅನೇಕ ಸಾಹಿತ್ಯ ಕೃತಿಗಳು ಸಾಕ್ಷಿಯಾಗಿವೆ ಎಂದರು.
ಮಹಾಸ್ವಾಮಿಗಳ ತಪಶ್ಶಕ್ತಿ, ಪ್ರಖರ ಪಾಂಡಿತ್ಯ ಹಾಗೂ ಶಿವಯೋಗದ ಬಲದಿಂದ ಮುಂದಾಗುವ ಸನ್ನಿವೇಶಗಳನ್ನು ಅರಿತು ತಿಳಿಸುವ ಸಾಮರ್ಥ್ಯ ಹೊಂದಿದ್ದರು. ಈ ನಾಡಿನ ರಾಜ ಪರಂಪರೆಯಲ್ಲಿ ಬಂದ ಭರಮಣ್ಣ ನಾಯಕರು ದನಗಾಹಿಯಿಂದ ರಾಜನಾದ ಘಟನೆಯೂ ಗುರುಗಳ ತಪಶ್ಶಕ್ತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಪಾಳೇದಹಳ್ಳಿಯಲ್ಲಿ ಆಂಜನೇಯಸ್ವಾಮಿ ದೇವಾಲಯದ ಪ್ರತಿಷ್ಠಾಪನೆ | ಆ.15ರಿಂದ ಮೂರು ದಿನಗಳ ಧಾರ್ಮಿಕ ಮಹೋತ್ಸವ
ಚಿತ್ರದುರ್ಗ ಬೃಹನ್ಮಠದ ಘನತೆಯನ್ನು ಅನೇಕ ಮಹಾತ್ಮರು ಹಾಗೂ ಗುರುಗಳು ತಮ್ಮ ಸಾಧನೆಯ ಮೂಲಕ ಎತ್ತಿಹಿಡಿದಿದ್ದಾರೆ. ಶ್ರಾವಣಮಾಸದಲ್ಲಿ ಇಂತಹ ಪುಣ್ಯಪುರುಷರ ಸ್ಮರಣೆ ನಿರಂತರವಾಗಿ ನಡೆಯಲಿದ್ದು, ಸಂಜೆ ‘ಪುಣ್ಯಪುರುಷರ ಚಿಂತನ ಮಾಲಿಕೆ’ಯಲ್ಲಿ ಜೀವನ ಸಾಧನೆಯ ಕುರಿತು ಉಪನ್ಯಾಸಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಾ. ಬಸವಕುಮಾರ ಸ್ವಾಮೀಜಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಸವ ಮುರುಘೇಂದ್ರ ಶ್ರೀಗಳು, ವಚನಾಭಿಷೇಕ ನಡೆಸಿಕೊಟ್ಟ ಸೇವಾಕರ್ತರಾದ ಗುತ್ತಿನಾಡು ಜಿ.ಎಂ. ಪ್ರಕಾಶ್ ಕುಟುಂಬದವರು, ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜ ಕಟ್ಟಿ, ಜೆ.ಎಸ್. ಮುರುಘೇಶ್, ಶ್ರೀಮಠದ ದಾಸೋಹ ಸಿಬ್ಬಂದಿ ಹಾಗೂ ಗುರುಕುಲ ಸಾಧಕರು ಉಪಸ್ಥಿತರಿದ್ದರು.
ಅನುಭಾವ ಶ್ರಾವಣ: ಶರಣ ಚಿಂತನಮಾಲಿಕೆ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಬಸವೇಶ್ವರ ಸಭಾಂಗಣದಲ್ಲಿ ಆ.14ರಂದು ಸಂಜೆ 6.30ಕ್ಕೆ ‘ಅನುಭಾವ ಶ್ರಾವಣ–ಶರಣ ಚಿಂತನಮಾಲಿಕೆ’ಯ ಎರಡನೇ ದಿನದ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಕಾರ್ಯಕ್ರಮದಲ್ಲಿ ‘ಗುಬ್ಬಿ ಶ್ರೀ ಚೆನ್ನಬಸವೇಶ್ವರರು’ ವಿಷಯದ ಕುರಿತು ಡಾ. ಮಹೇಶ್ ಸಿ.ಎನ್., ಮುಖ್ಯಶಿಕ್ಷಕರು, ಕಡ್ಲೆಗುದ್ದು ಅವರು ವಿಷಯಾವಲೋಕನ ಮಾಡಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

