
CHITRADURGA NEWS | 15 JUNE 2024
ಚಿತ್ರದುರ್ಗ: ನಟ ದರ್ಶನ್ ಮತ್ತು ಆತನ ನಟೋರಿಯಸ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣ ಇಡೀ ದೇಶದಲ್ಲೇ ತಲ್ಲಣ ಸೃಷ್ಟಿಸಿದೆ. ಚಿತ್ರದುರ್ಗದ ನಿವಾಸ ಶೋಕ ಸಾಗರಕ್ಕೆ ಜಾರಿದ್ದು, ತಂದೆ, ತಾಯಿ, ಪತ್ನಿಗೆ ಕರುನಾಡು ಸಾಂತ್ವನ ಹೇಳುತ್ತಿದೆ. ಆದರೂ ಕ್ಷಣದಿಂದ ಕ್ಷಣಕ್ಕೆ ದುಃಖ ಉಮ್ಮಳಿಸಿ ಬರುತ್ತಿದೆ.
ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಕ್ಷಣಕಾಲ ಮೌನಕ್ಕೆ ಜಾರಿದರು. ರೇಣುಕಾಸ್ವಾಮಿ ತಂದೆ ಕೈ ಮುಗಿಯುತ್ತಿದ್ದಂತೆ ವೀರೇಂದ್ರ ಪಪ್ಪಿ ಗದ್ಗದಿತರಾದರು.

ಬಳಿಕ ಮಾತನಾಡಿದ ಅವರು, ‘ರೇಣುಕಾ ಸ್ವಾಮಿಯ ಕೊಲೆಯ ಸಂಗತಿ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕ ಸಹಾಯ ಮಾಡಿದ್ದೇನೆ. ಶಿವಗಣಾರಾಧನೆ ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಟುಂಬಕ್ಕೆ ಭೇಟಿ ಮಾಡಿಸುವ ಕಾರ್ಯ ಮಾಡುತ್ತೇನೆ’ ಎಂದರು.
ಕ್ಲಿಕ್ ಮಾಡಿ ಓದಿ: ಗೋವಾ ಪ್ರವಾಸ ವೇಳೆ ಭೀಕರ ಅಪಘಾತ | ಮೃತರ ಗುರುತು ಪತ್ತೆ
‘ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆ ಚರ್ಚೆ ನಡೆಸಲಾಗುವುದು. ಇಡೀ ಕುಟುಂಬದ ಜತೆ ನಾವಿದ್ದೇವೆ’ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಕುಟುಂಬದ ಜತೆ ನಾವಿದ್ದೇವೆ | ಚಲನಚಿತ್ರ ವಾಣಿಜ್ಯ ಮಂಡಳಿ
‘ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನ ಜೀವ ತೆಗೆಯುವ ಮಟ್ಟಕ್ಕೆ ಹೋಗಬಾರದು. ಇಂತಹ ಪ್ರಯತ್ನ ಯಾರು ಮಾಡಬಾರದು. ಜನನಾಯಕರು, ಅಭಿಮಾನಿ ವರ್ಗ ಹೊಂದಿರುವವರು ಆದರ್ಶರಾಗಿರಬೇಕು. ಇಂತಹ ಹೀನ ಕೆಲಸ ಮಾಡಿದಾಗ ಬೇಲಿಯೇ ಎದ್ದು ಹೊಲ ಮೇದಂತೆ ಆಗುತ್ತದೆ’ ಎಂದರು.
‘ತಪ್ಪು ಯಾರೇ ಮಾಡಿದರು ರಕ್ಷಿಸುವ ಮಾತೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆ ಉತ್ತಮವಾಗಿ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
