Death: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಪ್ರಮುಖ ಆರೋಪಿ ರಘು ತಾಯಿ ನಿಧನ

ರಾಘವೇಂದ್ರ ಅವರ ತಾಯಿ ಮಂಜಮ್ಮ

CHITRADURGA NEWS | 20 JULY 2024
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಘವೇಂದ್ರ ಅವರ ತಾಯಿ ಮಂಜಮ್ಮ (65) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ನಗರದ ಕೋಳಿ ಬುರುಜನಹಟ್ಟಿಯಲ್ಲಿ ವಾಸವಾಗಿದ್ದ ಮಂಜಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಕೊಲೆ ಪ್ರಕರಣದಲ್ಲಿ ಮಗ ಬೆಂಗಳೂರಿನ ಪರಪ್ಪನ ಕಾರಾಗೃಹ ಸೇರಿದ ಕೊರಗಿನಲ್ಲಿದ್ದರು. ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕರಡಿ ಸಾವು | ಹೊಸ ಬೈಪಾಸ್‍ನಲ್ಲಿ ಘಟನೆ

ನಟ ದರ್ಶನ್ ಸಂಘದ ಜಿಲ್ಲಾ ಅಧ್ಯಕ್ಷನಾಗಿದ್ದ ರಾಘವೇಂದ್ರ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದಾನೆ. ಮನೆಯಲ್ಲಿ ಅಂತ್ಯ ಸಂಸ್ಕಾರಕ್ಕೂ ಕೂಡಾ ಅನುಕೂಲತೆ ಇಲ್ಲ, ತಾಯಿ ಅಂತ್ಯ ಸಂಸ್ಕಾರಕ್ಕೆ ಮಗ ರಘು ಅವರನ್ನ ಕರೆಸಿ ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version