
CHITRADURGA NEWS | 14 JUNE 2024
ಚಿತ್ರದುರ್ಗ: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಆರೋಪಿಗಳ ಜತೆ ಚಿತ್ರದುರ್ಗಕ್ಕೆ ಆಗಮಿಸಿದ ಬೆಂಗಳೂರು ಪೊಲೀಸರು ನಗರದ ವಿವಿಧ ಸ್ಥಳಗಳಲ್ಲಿ ಮಹಜರು ನಡೆಸಿದರು.
ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ ನಾಲ್ಕನೇ ಆರೋಪಿ ರಾಘವೇಂದ್ರ ಹಾಗೂ ಇತರರನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ನಗರದ ಚಳ್ಳಕೆರೆ ಗೇಟ್ ಬಳಿಯ ಬಾಲಾಜಿ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಬೆಂಗಳೂರು ರಸ್ತೆಯ ಪಕ್ಕದ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ಬಳಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದರು.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಕಾರು ಚಾಲಕ ರವಿ ಪೊಲೀಸರಿಗೆ ಶರಣಾಗತಿ

ಗುರುವಾರ ಮಧ್ಯಾಹ್ನ ಸ್ಥಳ ಮಹಜರು ನಡೆಸಲು ಆರೋಪಿಗಳನ್ನು ಕರೆತರುವ ವಿಚಾರ ತಿಳಿದಿದ್ದ ಕಾರಣ ಜನ ಚಳ್ಳಕೆರೆ ಟೋಲ್‌ಗೇಟ್ ಬಳಿ ಜನದಟ್ಟಣೆ ಹೆಚ್ಚಾಗಿತ್ತು. ಸಿಪಿಐ ಸಂಜೀವ್ ಗೌಡ ನೇತೃದಲ್ಲಿ ಆರೋಪಿ ರಘು ಕರೆತಂದು ಸ್ಥಳ ಮಹಜರು ನಡೆಸಿದರು.
ಕ್ಲಿಕ್ ಮಾಡಿ ಓದಿ: ತಿಪ್ಪಾರೆಡ್ಡಿ ಅಂದ್ರೆ ನೀವೇನಾ..!? | ಪ್ರತಿಭಟನೆ ಮಾಡಿದ್ದಕ್ಕೆ ಬಂತು ಬೆದರಿಕೆ ಕರೆ
ಜೂನ್ 8 ರ ಬೆಳಗ್ಗೆ 9.48ರ ವೇಳೆಗೆ ಬಾಲಾಜಿ ಬಾರ್ ಬಳಿ ರೇಣುಕಸ್ವಾಮಿ ಬೈಕ್ ಅಡ್ಡಗಟ್ಟಿದ ರಾಘವೇಂದ್ರ ಆಟೋದಲ್ಲಿ ಕರೆದುಕೊಂಡು ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್‌ಗೆ ಕರೆತಂದಿದ್ದನು. ಬಳಿಕ ಆರೋಪಿ ರವಿಯ ಕಾರು ಕರೆಸಿಕೊಂಡು ಬೆಂಗಳೂರಿಗೆ ಡಿಬಾಸ್ ಗ್ಯಾಂಗ್ ತೆರಳಿತ್ತು.
ಪ್ರಕರಣದ ಇಂಚಿಂಚು ಮಾಹಿತಿ, ಸ್ಥಳದಲ್ಲಿ ಅಳತೆ ಮಾಡಿ ಸಾಕ್ಷಿ ಸಂಗ್ರಹ ಮಾಡಿದರು. ಎರಡೂ ಜಾಗದಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲೇ ರಾತ್ರಿ 1.30 ರಿಂದ 2.30 ವರೆಗೆ ಮಹಜರು ನಡೆಸಲಾಯಿತು. ಡಿವೈಎಸ್‌ಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ ಎಂಟನೇ ಆರೋಪಿ ರವಿಯನ್ನು ಇದೇ ವೇಳೆ ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
