CHITRADURGA NEWS | 09 OCTOBER 2024
ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿ ನಿರ್ಮಾಣ ಮಾಡಿರುವ ರೈಲ್ವೇ ಕೆಳ ಸೇತುವೆ(Railway Underbridge) ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಸಾಕಷ್ಟು ಮಳೆಯಾದಾಗ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ. ತಕ್ಷಣ ರೈಲ್ವೇ ಅಧಿಕಾರಿಗಳು ಇದನ್ನು ಸರಿಪಡಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಸೂಚಿಸಿದರು.
ಕ್ಲಿಕ್ ಮಾಡಿ ಓದಿ: APMC; ಮಾರುಕಟ್ಟೆ ಧಾರಣೆ | 09 ಅಕ್ಟೋಬರ್ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?

ಬುಧವಾರ ರಾತ್ರಿ ಮಳೆ ಸುರಿದ ಹಿನ್ನೆಲೆಯಲ್ಲಿ ತುರುವನೂರು ರಸ್ತೆಯ ಗೋನೂರು ಬಳಿ ರೈಲ್ವೇ ಕೆಳ ಸೇತುವೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅರಿತ ಸಂಸದರು, ರೈಲ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರೈಲ್ವೆ ಕೆಳ ಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಇಂತಹ ಸೇತುವೆಗಳನ್ನು ಪಟ್ಟಿ ಮಾಡಿ ಸಭೆಯಲ್ಲಿ ರೈಲ್ವೆ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಸಾಕಷ್ಟು ಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಕೂಡಲೇ ಇವುಗಳನ್ನು ಸರಿಪಡಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಲಿಕ್ ಮಾಡಿ ಓದಿ: Dasara festival; ದಸರಾ ವಿಶೇಷ | ನಗರದ ವಿ.ಪಿ ಬಡಾವಣೆಯಲ್ಲಿ ಬೊಂಬೆಗಳ ಮನೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
