CHITRADURGA NEWS | 26 JANUARY 2026
ಚಿತ್ರದುರ್ಗ: ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದನ್ನೂ ಓದಿ: ಶ್ರೀ ಅಹೋಬಲ TVS ನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
ನಂತರ ಮಾತನಾಡಿದ ಅವರು, ಜನವರಿ 26 ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ ಎಲ್ಲಾ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ ಮತ್ತು ನಮ್ಮ ದೇಶದ ಶ್ರೇಷ್ಠ ಸಂವಿಧಾನವನ್ನು ಮನಃಪೂರ್ವಕವಾಗಿ ಅಂತಃಕರಣದಿಂದ ಒಪ್ಪಿ ಸಂತಸಪಟ್ಟ ದಿನ ಎಂದರು.
ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನೇಕ ಮಹನೀಯರುಗಳು, ಸ್ವಾತಂತ್ರ್ಯ ಹೋರಾಟಗಾರರ, ತ್ಯಾಗ-ಬಲಿದಾನ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂದು ಅವರು ಸ್ವಾತಂತ್ರ್ಯಗೊಂಡ ನಂತರ, ಇಡೀ ದೇಶವನ್ನು ಭೌಗೋಳಿಕ ವಾಗಿ, ಭಾಷಿಕವಾಗಿ ಒಗ್ಗೂಡಿಸುವ ಅನಿವಾರ್ಯತೆ ಉದ್ಭವಿಸಿತು.
ಜೊತೆಗೆ ಏಕರೂಪದ ಕಾನೂನು ಹಾಗೂ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ದೇಶದ ಏಕತೆಯನ್ನು ಬಲಪಡಿಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ “ಭಾರತ ಸಂವಿಧಾನ ಕರಡು ರಚನಾ ಸಮಿತಿ”ಯನ್ನು ರಚಿಸಲಾಯಿತು ಎಂದು ಹೇಳಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್
77 ವರ್ಷಗಳಿಂದ ನಾವುಗಳು ಭಾರತದ ಸಂವಿಧಾನದ ಅಡಿಯಲ್ಲಿ ಕೆಲಸವನ್ನು ಮಾಡಲಾಗುತ್ತಿದೆ. ವಿಶ್ವದ ಬಲಿಷ್ಠ ಶಕ್ತಿಯಾಗಿ ಭಾರತ ಹೊರ ಹೊಮ್ಮಿದೆ. ನಮ್ಮ ಸೈನಿಕರ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದ ವಿಶ್ವಕ್ಕೆ ಭಾರತ ಸೇನೆ ಬಲಿಷ್ಠ ಎಂದು ತಿಳಿದು ಬಂದಿದೆ. ಇದರಿಂದ ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಉತ್ತಮವಾಗಿದೆ. ಪಾಶ್ಚಿಮಾತ್ಯರು ಭಾರತವನ್ನು ಬಡವರ, ಹಾವಾಡಿಗೆ ದೇಶ ಎನ್ನುತ್ತಿದ್ದರು, ಆದರೆ ಈಗ ಭಾರತ ಬಲಿಷ್ಠವಾದ ದೇಶವಾಗುವುದರ ಮೂಲಕ ಪ್ರಪಂಚಕ್ಕೆ ತನ್ನ ಶಕ್ತಿಯನ್ನು ತೋರಿಸಿದೆ. ವಿಜ್ಞಾನ, ಆರ್ಥಿಕತೆ, ರಕ್ಷಣಾ ವ್ಯವಸ್ಥೆಯಲ್ಲಿ ಪ್ರಗತಿ ಸಾಧಿಸಿದೆ ಎಂದರು.
ಬಿಜೆಪಿಯ ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು
ಇದನ್ನೂ ಓದಿ: ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
ಬಿಜೆಪಿ ಮಾಜಿ ಅಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ಮುಖಂಡರಾದ ಪಾಪೇಶ್ ನಾಯ್ಕ್, ಕಲ್ಲಂ ಸೀತಾರಾಮರೆಡ್ಡಿ, ರೇಖಾ, ಬಸಮ್ಮ, ಭರತ್, ಕವಿತಾ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
