By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
    3 hours ago
    ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
    4 hours ago
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್‌, ಪ್ರಾಂಜಲಾಗೆ ಕಿರೀಟ
    6 hours ago
    ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
    ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) | ಚಿತ್ರದುರ್ಗದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮನವಿ
    18 hours ago
    ಬಿಎಸ್‌ವೈ ಅಭಿಮಾನೋತ್ಸ
    ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    4 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    19 hours ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 30 | ಉದ್ಯೋಗದಲ್ಲಿ ನಿರುತ್ಸಾಹಕರ ವಾತಾವರಣ, ಆದಾಯಕ್ಕಿಂತ ಹೆಚ್ಚು ಖರ್ಚು
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    21 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    22 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Red or black pot
    ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
    5 hours ago
    sunscreen
    ಸನ್‌ಸ್ಕ್ರೀನ್ ಬಳಸುವ ಸರಿಯಾದ ವಿಧಾನ ತಿಳಿದುಕೊಳ್ಳಿ
    6 hours ago
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    1 day ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    1 day ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    2 days ago
Reading: ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್

News Desk Chitradurga News
Last updated: 26 January 2026 17:56
News Desk Chitradurga News
3 months ago
Share
ಗಣರಾಜ್ಯೋತ್ಸವ
ಗಣರಾಜ್ಯೋತ್ಸವ
SHARE

CHITRADURGA NEWS | 26 JANUARY 2026

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ತಿಳಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ರಥಸಪ್ತಮಿ | 108 ಸೂರ್ಯ ನಮಸ್ಕಾರ

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಅವರು ನಂತರ ಗಣರಾಜ್ಯೋತ್ಸವ ಸಂದೇಶ ನೀಡಿದರು.

ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ 2677 ಕೋಟಿ ರೂ.ಗಳ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ಕೃಷಿ ಸಾಧನೆಯಲ್ಲಿ ಜಿಲ್ಲೆ ನಂಬರ್ 1 : 

ಜಿಲ್ಲೆಯ ರೈತರ ಸಾಧನೆಯನ್ನು ಶ್ಲಾಘಿಸಿದ ಸಚಿವರು, 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯು 48,682 ಟನ್ ಸಿರಿಧಾನ್ಯ ಉತ್ಪಾದಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ತೋಟಗಾರಿಕೆ ಮತ್ತು ಸಣ್ಣ ನೀರಾವರಿ ಇಲಾಖೆಗಳ ಮೂಲಕ ಸಾವಿರಾರು ರೈತರಿಗೆ ಕೋಟ್ಯಂತರ ರೂಪಾಯಿಗಳ ಸೌಲಭ್ಯ ಒದಗಿಸಲಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

ಕೈಗಾರಿಕೆ ಮತ್ತು ರೈಲ್ವೆ ಅಭಿವೃದ್ಧಿ: 

ಜಿಲ್ಲೆಯ ಕೈಗಾರಿಕೆ ಅಭಿವೃದ್ದಿಗೆ ವೇಗ ನೀಡಿದ್ದು ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರೆಯಲಿದೆ.ದಾವಣಗೆರೆ-ತುಮಕೂರು ನೇರ ರೈಲು ಮಾರ್ಗಕ್ಕಾಗಿ ಸರ್ಕಾರ 1,211 ಎಕರೆ ಜಮೀನು ಹಸ್ತಾಂತರಿಸಿದ್ದು, ಡಿಸೆಂಬರ್ 2027ರ ವೇಳೆಗೆ ಈ ಯೋಜನೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ | ಸರ್ಕಾರಿ ಅಧಿಕಾರಿಗಳಿಗೆ ಸನ್ಮಾನ

ನಮ್ಮ ಸಂವಿಧಾನವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಬದುಕು ಕಲ್ಪಿಸಿದೆ. ಸಂವಿಧಾನ ರಚನಾ ಸಮಿತಿಯಲ್ಲಿ ನಮ್ಮ ಜಿಲ್ಲೆಯ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ನಿಜಲಿಂಗಪ್ಪನವರು ಇದ್ದದ್ದು ನಮಗೆ ಹೆಮ್ಮೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ರಾಜ್ಯದ ಸವಾರ್ಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಅವರು ಹೇಳಿದರು.

ಪೊಲೀಸ್ ಪೀಕ್ ಕ್ಯಾಪ್ ವಿತರಣೆ: 

ಪೊಲೀಸ್ ಕಾನ್ಸ್‍ಟೇಬಲ್‍ಗಳಿಗೆ ಸ್ಲೋಚ್ ಹ್ಯಾಟ್ ಬದಲು ಪೀಕ್ ಕ್ಯಾಪ್ ನೀಡಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪೊಲೀಸರಿಗೆ ಸಾಂಕೇತಿಕವಾಗಿ ಸಚಿವ ಡಿ.ಸುಧಾಕರ್ ಪೀಕ್ ಕ್ಯಾಪ್ ವಿತರಿಸಿದರು. ಇದೇ ವೇಳೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸರ್ಕಾರಿ ಶಾಲೆಗಳಿಗೆ ನೀಡಿರುವ ಕ್ರೀಡಾ ಪರಿಕರಗಳನ್ನು ಹಾಗೂ ಸ್ವಾವಲಂಬಿ ಸಾರಥಿ ಯೋಜನೆಡಿ ಫಲಾನುಭವಿಗಳಿಗೆ ವಾಹನಗಳ ಕೀ ಅನ್ನು ಸಚಿವರು ಹಸ್ತಾಂತರಿಸಿದರು. ಎಸ್‍ಎಸ್.ಎಲ್.ಸಿ ಅಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಚೆಕ್ ನೀಡಿದರು.  

ಇದನ್ನೂ ಓದಿ: ರಥಸಪ್ತಮಿ | ಸಾಮೂಹಿಕ ಸೂರ್ಯನಮಸ್ಕಾರ | ಸೂರ್ಯ ದೇವರ ಆರಾಧನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸತತ 5 ವರ್ಷಗಳ ಕಾಲ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆಗಾಗಿ ಸಂಸ್ಥೆ ವತಿಯಿಂದ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರವನ್ನು ಚಿತ್ರದುರ್ಗ ಘಟಕದ ಚಾಲಕ ಮನೋಹರ್ ಆರ್. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿ, ಗೌರವಿಸಿದರು.

ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ: 

ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗೆ ಭಾಜನರಾದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ

ಸಶಸ್ತ್ರ ಮೀಸಲು ಪಡೆ, ನಾಗರೀಕ ಪೊಲೀಸ್, ಗೃಹ ರಕ್ಷಕ, ಅರಣ್ಯ ಇಲಾಖೆ ತುಕಡಿಗಳು ಎನ್‍ಸಿಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ತಂಡ, ಪೊಲೀಸ್ ಬ್ಯಾಂಡ್ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. 

ಇದನ್ನೂ ಓದಿ: ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ | ಫೆಬ್ರವರಿ 01ಕ್ಕೆ

ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆ, ನಗರದ ಕೆ.ಕೆ.ನ್ಯಾಷನಲ್ ಸ್ಕೂಲ್, ರೀಜಿನಲ್ ಮತ್ತು ಕ್ರಸೆಂಟ್ ಶಾಲೆ ಮಕ್ಕಳು ದೇಶಭಕ್ತಿ ಹಾಗೂ ವೈವಿಧ್ಯತೆ ಬಿಂಬಿಸುವ ನೃತ್ಯ ರೂಪಕಗಳನ್ನು ಪ್ರಸ್ತುತ ಪಡಿಸಿದರು. ಪಥ ಸಂಚಲನದಲ್ಲಿ ಭಾಗವಹಿಸಿದ ಮೆದೇಹಳ್ಳಿ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಪ್ರಥಮ, ಗುಳೇನಹಟ್ಟಿಯ ಮೊರಾರ್ಜಿ ದೇಸಾಯಿ ದ್ವೀತಿಯ, ಮಲ್ಲಾಡಿಹಳ್ಳಿ ಗಾರ್ಡಿಯನ್ ಏಂಜಲ್ ಶಾಲೆಯ ತಂಡಗಳು ತೃತೀಯ ಸ್ಥಾನ ಪಡೆದುಕೊಂಡವು.

ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಭೋವಿ ನಿಗಮದ ಅಧ್ಯಕ್ಷ ವಿ.ರಾಮಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper River ProjectChitradurgaChitradurga newsRepublic Dayಗಣರಾಜ್ಯೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾ ಮೇಲ್ದಂಡೆ ಯೋಜನೆ
Share This Article
Facebook Email Print
Previous Article ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
Next Article ಶ್ರೀ ಅಹೋಬಲ TVS ನಲ್ಲಿ 77ನೇ ಗಣರಾಜೋತ್ಸವ ಆಚರಣೆ ಶ್ರೀ ಅಹೋಬಲ TVS ನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
ಮುಖ್ಯ ಸುದ್ದಿ
Red or black pot
ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up