CHITRADURGA NEWS | 23 JANUARY 2026
ಚಿತ್ರದುರ್ಗ: ಜಿಲ್ಲಾಡಳಿತ ವತಿಯಿಂದ ಇದೇ ಜ.26ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ಗಣರಾಜ್ಯೋತ್ಸವ ಸಂದೇಶ ನೀಡುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಸೇರಿದಂತೆ ನಗರಸಭೆ ಸದಸ್ಯರು, ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುವರು.
ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆ ಅಂಗವಾಗಿ ಪೂರ್ವಸಿದ್ಧತಾ ಸಭೆ | ಮಾರ್ಚ್ 06ರಂದು ದೊಡ್ಡ ರಥೋತ್ಸವ
ಜಿಲ್ಲಾ ಆಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಸಂಜೆ 6ಕ್ಕೆ ಚಿತ್ರದುರ್ಗ ಪ್ರಶಾಂತ ನಗರದ ಜಿ.ಜಿ.ಕಲ್ಯಾಣ ಮಂಟಪದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
