CHITRADURGA NEWS | 08 JULY 2024
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ಯರಬಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಗೊಲ್ಲಹಳ್ಳಿ ಎಸ್ಸಿ. ಕಾಲೋನಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆದಿ ಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: PRIYANKA KHARGE ; ಜುಲೈ 10 ರಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆ ಅಗಲೀಕರಣಕ್ಕಾಗಿ ಮನೆ, ಖಾಲಿ ನಿವೇಶನಗಳನ್ನು ಬಿಟ್ಟುಕೊಟ್ಟು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.
ಗೋಮಾಳದಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದ್ದು, ಇದುವರೆವಿಗೂ ಹಕ್ಕುಪತ್ರಗಳನ್ನು ನೀಡಿಲ್ಲ. ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ಜೀವಿಸುತ್ತಿದ್ದೇವೆ. ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಂಡು ವಾಸ ಮಾಡುವಂತಾಗಿದೆ. ಕೂಡಲೆ ಕರೆಂಟ್ ವ್ಯವಸ್ಥೆಯಾಗಬೇಕೆಂದು ಗೊಲ್ಲಹಳ್ಳಿಯ ಎಸ್ಸಿ. ಕಾಲೋನಿ ನಿವಾಸಿಗಳು ಒತ್ತಾಯಿಸಿದರು.
ಇದನ್ನೂ ಓದಿ: POLICE; ಕಳೆದುಕೊಂಡಿದ್ದ 80 ಮೊಬೈಲ್ ಹುಡುಕಿಕೊಟ್ಟ ಪೊಲೀಸರು
ಈ ವೇಳೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ನಿಸಾರ್, ಗೊಲ್ಲಹಳ್ಳಿ ಗ್ರಾಮಸ್ಥರಾದ ರಂಗಸ್ವಾಮಿ, ಹಿಮಂತರಾಜು, ರಂಗಮ್ಮ, ಯಶೋಧಮ್ಮ, ಗುರುಸಿದ್ದಮ್ಮ, ನಿರ್ಮಲ, ಜಯಣ್ಣ, ತಿಪ್ಪಣ್ಣ, ಹರೀಶ, ಮಂಜಮ್ಮ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
