CHITRADURGA NEWS | 30 NOVEMBER 2025
ಚಿತ್ರದುರ್ಗ: ಸರ್ಕಾರದ ಆದೇಶದಂತೆ ಶೇ.60 ರಷ್ಟು ಕನ್ನಡ ಕಡ್ಡಾಯ ನಾಮಫಲಕಗಳನ್ನು ಅಳವಡಿಸುವಂತೆ ಕರುನಾಡ ವಿಜಯಸೇನೆಯಿಂದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಡಿಸೆಂಬರ್ 02 ರಂದು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ರಾಮಪ್ಪ ಜಿಲ್ಲಾ ಪ್ರವಾಸ
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುವ, ಸಂಘ ಸಂಸ್ಥೆಗಳು, ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು
ಬಸ್‌ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮ ಫಲಕಗಳನ್ನು ಅಳವಡಿಸುವಂತೆ ಸಾಕಷ್ಟು ಹೋರಾಟ ಮಾಡಿ, ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿದು ಕೇಸು ಹಾಕಿಸಿಕೊಂಡಿದ್ದೇವೆ.
ಆದರೂ ಕನ್ನಡ ನಾಮಫಲಕಗಳನ್ನು ಅಳವಡಿಸದೆ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಜರೂರಾಗಿ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಇದನ್ನೂ ಓದಿ: ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘಕ್ಕೆ ಚಿತ್ರದುರ್ಗ ಜಿಲ್ಲಾಧ್ಯಕ್ಷರ, ಪದಾಧಿಕಾರಿಗಳ ಆಯ್ಕೆ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಚಂದನ ಆರ್, ಕಮಲಮ್ಮ, ಅವಿನಾಶ್, ಅಖಿಲೇಶ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

