CHITRADURGA NEWS | 12 MARCH 2024
ಚಿತ್ರದುರ್ಗ: ಪೋಕ್ಸೋ, ಜಾತಿ ನಿಂಧನೆ, ಧಾರ್ಮಿಕ ಕೇಂದ್ರಗಳ ದುರ್ಬಳಕೆಯಂತಹ ಆರೋಪ ಹೊತ್ತಿರುವ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಸೋಮವಾರ ಹೈಕೋರ್ಟ್ ನೀಡಿರುವ ತೀರ್ಪು ಸಣ್ಣ ರಿಲೀಫ್ ನೀಡಿದಂತಾಗಿದೆ.
ಶ್ರೀಗಳ ವಿರುದ್ಧದ ಅತ್ಯಾಚಾರ ಹಾಗೂ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಸೂಕ್ತ ರೀತಿಯಲ್ಲಿ ಮರು ನಿಗಧಿ ಮಾಡುವಂತೆ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಇದನ್ನೂ ಓದಿ: ಏರಿಕೆಯ ಹಾದಿ ಹಿಡಿದ ರಾಶಿ ಅಡಿಕೆ ಬೆಲೆ
ಹೈಕೋರ್ಟ್ನ ಈ ಆದೇಶದಿಂದ ಶ್ರೀಗಳ ವಿರುದ್ಧ ದಾಖಲಾಗಿದ್ದ ಜಾತಿ ನಿಂಧನೆ ಹಾಗೂ ಧಾರ್ಮಿಕ ಕೇಂದ್ರಗಳ ದುರ್ಬಳಕೆ ಆರೋಪಗಳಿಂದ ರಕ್ಷಣೆ ಸಿಕ್ಕಂತಾಗುತ್ತದೆ. ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಗಳಡಿ ನಿಗಧಿಯಾಗಿರುವ ಆರೋಪಗಳಿಗೆ ವಿಚಾರಣೆ ಎದುರಿಸಬೇಕಾಗುತ್ತದೆ.
ಮುರುಘಾ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರದುರ್ಗ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ನಿಗಧಿಪಡಿಸಿರುವ ಆದೇಶಗಳನ್ನು ವಜಾ ಮಾಡುವಂತೆ ಕೋರಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಹೈಕೋರ್ಟ್ನಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಕೋಟೆ ನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
ಶ್ರೀಗಳ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮೇಲಿನಂತೆ ಆದೇಶ ಹೊರಡಿಸಿದೆ.
ಈ ಆದೇಶವನ್ನು 2023 ನವೆಂಬರ್ 23 ರಂದು ಕಾಯ್ದಿರಿಸಲಾಗಿತ್ತು. ಈ ಸಂಬಂಧ ವಿಸ್ತøತ ಆದೇಶ ಇನ್ನೂ ಹೊರಬರಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
