Connect with us

    ವಿವಿ ಸಾಗರಕ್ಕೆ ಹೆಚ್ಚಾದ ಒಳಹರಿವು | 114 ಅಡಿ ತಲುಪಿದ ಜಲಾಶಯ ಮಟ್ಟ

    ವಾಣಿವಿಲಾಸ ಸಾಗರ ಜಲಾಶಯ

    ಮುಖ್ಯ ಸುದ್ದಿ

    ವಿವಿ ಸಾಗರಕ್ಕೆ ಹೆಚ್ಚಾದ ಒಳಹರಿವು | 114 ಅಡಿ ತಲುಪಿದ ಜಲಾಶಯ ಮಟ್ಟ

    CHITRADURGA NEWS | 26 MAY 2024

    ಚಿತ್ರದುರ್ಗ: ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರಕ್ಕೆ ನೀರಿನ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.

    ವೇದಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ ಜಲಾಶಯಕ್ಕೆ ಮೇ.26 ಬೆಳಗ್ಗೆ 8 ಗಂಟೆಗೆ ನಡೆಸಿದ ಪಾಮನದಲ್ಲಿ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

    ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಶಿಕ್ಷಣ ಕ್ಷೇತ್ರ ಕಲುಷಿತ | ಬಿ.ವೈ.ವಿಜಯೇಂದ್ರ ವಾಗ್ದಾಳಿ

    ಮೇ.26 ಬೆಳಗ್ಗೆ 8 ಗಂಟೆ ಹೊತ್ತಿಗೆ ಜಲಾಶಯಕ್ಕೆ 1095 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದಿಷ್ಟೂ ಒಳಹರಿವಾಗಿದೆ. ಜಲಾಶಯದಿಂದ ಯಾವುದೇ ಹೊರ ಹರಿವು ಇಲ್ಲ.

    135 ಅಡಿ ಎತ್ತರದ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವಿದೆ. ಸದ್ಯ ಜಲಾಶಯದಲ್ಲಿ 114 ಅಡಿ ನೀರು ಸಂಗ್ರಹವಾಗಿದ್ದು, ಒಟ್ಟು 18.26 ಟಿಎಂಸಿ ನೀರು ಲಭ್ಯವಿದೆ.

    ಇದನ್ನೂ ಓದಿ: ಮೂಡಿಗೆರೆ ಬಳಿ ಭೀಕರ ಅಪಘಾತದಲ್ಲಿ ಮಡಿದವರಿಗೆ ಪರಿಹಾರದ ಭರವಸೆ | ಸಚಿವ ಡಿ.ಸುಧಾಕರ್

    ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯಿಂದಾಗಿ ಈವರೆಗೆ ಒಂದೂವರೆ ಟಿಎಂಸಿಗಿಂತಲೂ ಅಧಿಕ ನೀರು ಸಂಗ್ರಹವಾಗಿದೆ.

    ಮೇ.24 ಮತ್ತು 25 ರಂದು 780 ಕ್ಯೂಸೆಕ್ ಒಳಹರಿವಿತ್ತು. ಮೇ.24 ಸಂಜೆ ಮಳೆ ಸುರಿದ ಪರಿಣಾಮ ಮೇ.26ರ ಮಾಪನದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ.

    ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ

    ಸದ್ಯ ಪೂರ್ವ ಮುಂಗಾರು ಮಳೆ ಮಾತ್ರ ಸುರಿಯುತ್ತಿದ್ದು, ಮುಂಗಾರು ಅಧಿಕೃತವಾಗಿ ಆರಂಭವಾಗಿಲ್ಲ. ಈ ವರ್ಷ ಉತ್ತಮ ಮಳೆ ಸುರಿಯುವ ಲಕ್ಷಣಗಳಿದ್ದು, ಮತ್ತೆ ಜಲಾಶಯ ಭರ್ತಿಯಾಗುವ ಸಾಧ್ಯತೆಗಳಿವೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top