
CHITRADURGA NEWS | 26 MAY 2024
ಚಿತ್ರದುರ್ಗ: ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರಕ್ಕೆ ನೀರಿನ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.
ವೇದಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ ಜಲಾಶಯಕ್ಕೆ ಮೇ.26 ಬೆಳಗ್ಗೆ 8 ಗಂಟೆಗೆ ನಡೆಸಿದ ಪಾಮನದಲ್ಲಿ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಶಿಕ್ಷಣ ಕ್ಷೇತ್ರ ಕಲುಷಿತ | ಬಿ.ವೈ.ವಿಜಯೇಂದ್ರ ವಾಗ್ದಾಳಿ
ಮೇ.26 ಬೆಳಗ್ಗೆ 8 ಗಂಟೆ ಹೊತ್ತಿಗೆ ಜಲಾಶಯಕ್ಕೆ 1095 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದಿಷ್ಟೂ ಒಳಹರಿವಾಗಿದೆ. ಜಲಾಶಯದಿಂದ ಯಾವುದೇ ಹೊರ ಹರಿವು ಇಲ್ಲ.
135 ಅಡಿ ಎತ್ತರದ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವಿದೆ. ಸದ್ಯ ಜಲಾಶಯದಲ್ಲಿ 114 ಅಡಿ ನೀರು ಸಂಗ್ರಹವಾಗಿದ್ದು, ಒಟ್ಟು 18.26 ಟಿಎಂಸಿ ನೀರು ಲಭ್ಯವಿದೆ.
ಇದನ್ನೂ ಓದಿ: ಮೂಡಿಗೆರೆ ಬಳಿ ಭೀಕರ ಅಪಘಾತದಲ್ಲಿ ಮಡಿದವರಿಗೆ ಪರಿಹಾರದ ಭರವಸೆ | ಸಚಿವ ಡಿ.ಸುಧಾಕರ್
ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯಿಂದಾಗಿ ಈವರೆಗೆ ಒಂದೂವರೆ ಟಿಎಂಸಿಗಿಂತಲೂ ಅಧಿಕ ನೀರು ಸಂಗ್ರಹವಾಗಿದೆ.
ಮೇ.24 ಮತ್ತು 25 ರಂದು 780 ಕ್ಯೂಸೆಕ್ ಒಳಹರಿವಿತ್ತು. ಮೇ.24 ಸಂಜೆ ಮಳೆ ಸುರಿದ ಪರಿಣಾಮ ಮೇ.26ರ ಮಾಪನದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ.
ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ
ಸದ್ಯ ಪೂರ್ವ ಮುಂಗಾರು ಮಳೆ ಮಾತ್ರ ಸುರಿಯುತ್ತಿದ್ದು, ಮುಂಗಾರು ಅಧಿಕೃತವಾಗಿ ಆರಂಭವಾಗಿಲ್ಲ. ಈ ವರ್ಷ ಉತ್ತಮ ಮಳೆ ಸುರಿಯುವ ಲಕ್ಷಣಗಳಿದ್ದು, ಮತ್ತೆ ಜಲಾಶಯ ಭರ್ತಿಯಾಗುವ ಸಾಧ್ಯತೆಗಳಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

