CHITRADURGA NEWS | 01 JUNE 2025
ಚಿತ್ರದುರ್ಗ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿ ಸಾಮಾನ್ಯ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ 1:1 ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳ ಕೌನ್ಸಿಲಿಂಗ್ ನಗರದ ಬ್ಯಾಂಕ್ ಕಾಲೋನಿ, ಅಲೆಗ್ಸಾಂಡರ್ ಲೇ ಔಟ್‌ನ, ಬಡಾವಣೆ ಪೊಲೀಸ್ ಠಾಣೆ ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ನಡೆಯಲಿದೆ.
Also Read: ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಜೂನ್ 3 ತಾರೀಖಿನಂದು ಬೆಳಿಗ್ಗೆ 10 ಗಂಟೆಯಿಂದ ಬಾಲಕಿಯರು ಮತ್ತು ವಿಶೇಷ ವರ್ಗದ ಬಾಲಕರ ಕೌನ್ಸಲಿಂಗ್ ಹಾಗೂ ಜೂನ್ 4 ರಂದು ಬೆಳಿಗ್ಗೆ 10 ಗಂಟೆಯಿಂದ ಬಾಲಕರ ಕೌನ್ಸಲಿಂಗ್ ನಡೆಸಲಾಗುವುದು.
ಸದರಿ ದಿನಾಂಕಗಳಂದು ಮೂಲ ದಾಖಲೆಗಳೊಂದಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

