
CHITRADURGA NEWS | 03 SEPTEMBER 2025
ಚಿತ್ರದುರ್ಗ: ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿದರು.
ಇದನ್ನೂ ಓದಿ: ಹರಿಹರ ಶಾಸಕ ಹರೀಶ್ ವಿರುದ್ಧ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ
ಎಐಡಿಎಸ್‍ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ.
ಸೆಪ್ಟೆಂಬರ್ ನಲ್ಲಿ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ.
ಖಾಸಗಿ ಕಾಲೇಜುಗಳಲ್ಲಿ ಪಾಠಗಳು ನಡೆಯುತ್ತಿದ್ದರೆ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ದಿನವೂ ಕಾಲೇಜಿಗೆ ಬಂದು ತರಗತಿಗಳು ನಡೆಯದೇ ಮನೆಗಳಿಗೆ ಹಿಂದಿರುಗುವಂತಾಗಿದೆ.
ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು.
ಇದನ್ನೂ ಓದಿ: SEP, TSP ಅನುದಾನದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಿ | ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಒತ್ತಾಯ
ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಹೇಳಿದರು.
ಎಐಡಿಎಸ್‍ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ, ವಿದ್ಯಾರ್ಥಿಗಳು ಗಜೇಂದ್ರ , ಮೌನೇಶ್, ಸ್ವಪ್ನ, ಸಾನಿಯಾ, ಭಾರ್ಗವಿ, ದ್ಯಾನೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

