
CHITRADURGA NEWS | 21 DECEMBER 2025
ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪತ್ರಿಕಾ ಭವನದ ಅಂಬೇಡ್ಕರ್ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಇದನ್ನೂ ಓದಿ: ಸಂಸದರು, ಶಾಸಕರ ಅನುದಾನದ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ | ADC ಕುಮಾರಸ್ವಾಮಿ
ಜಿಲ್ಲಾಧ್ಯಕ್ಷರಾಗಿ ಬಿ.ಎಸ್.ವಿನಾಯಕ ತೊಡರನಾಳು, ಪ್ರಧಾನ ಕಾರ್ಯದರ್ಶಿ ವೀರೇಶ್ ವಿ. ಅಪ್ಪು, ಖಜಾಂಚಿಯಾಗಿ ಡಿ.ಕುಮಾರಸ್ವಾಮಿ, ರಾಜ್ಯ ಸಮಿತಿ ಸದಸ್ಯರಾಗಿ ಎಸ್.ಸಿದ್ಧರಾಜು, ಉಪಾಧ್ಯಕ್ಷರಾಗಿ ಎಂ.ಎನ್.ಅಹೋಬಳಪತಿ, ನಾಗತಿಹಳ್ಳಿ ಮಂಜುನಾಥ್, ಸಿ.ಪಿ.ಮಾರುತಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಮಾಣ ವಚನ ಸ್ವೀಕರಿಸಿ ಪದಗ್ರಹಣ ಮಾಡಿದರು.
ಯಾರ್ಯಾರು ಏನೇನು ಹೇಳಿದರು:
ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕ್ರಿಮಿನಲ್ ಪತ್ರಕರ್ತರು, ಸುಳ್ಳು ಪತ್ರಕರ್ತರು, ಬ್ಲಾಕ್‌ಮೇಲ್ ಮಾಡುವ ಪತ್ರಕರ್ತರನ್ನು ಈ ವ್ಯವಸ್ಥೆಯಿಂದ ಹೊರಹಾಕುವ ಕೆಲಸ ಮಾಡಬೇಕಿದೆ. ಇಲ್ಲವಾದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಘನತೆ, ಗೌರವ ಇರುವುದಿಲ್ಲ, ಈ ನಿಟ್ಟಿನಲ್ಲಿ ರಾಜ್ಯ ಸಂಘ ಮುಂದಾಗಿದೆ. ಜಿಲ್ಲಾ ಸಂಘವು ಇದಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಒಳಪಂಗಡಗಳು ವೀರಶೈವ – ಲಿಂಗಾಯತ ಮಹಾಸಭಾ ಜೊತೆ ನಿಲ್ಲಬೇಕು | ಕೆ.ಎಸ್.ನವೀನ್
ಸಂಘದ ನೂತನ ಜಿಲ್ಲಾಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳ್ ಮಾತನಾಡಿ, ಹಿಂದಿನ ಅಧ್ಯಕ್ಷರಂತೆ ಸಂಘಕ್ಕೆ ಯಾವುದೇ ಚ್ಯುತಿ ಬಾರದಂತೆ, ಹಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಮುನ್ನೆಡೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಜಿಲ್ಲೆಯ ಪತ್ರಕರ್ತರು ನಿಸ್ಪಕ್ಷಪಾತ ವರದಿ ಮೂಲಕ ಸಮಾಜದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದ ಅವರು, ಪತ್ರಕರ್ತರ ಬೇಡಿಕೆಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದು, ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ಶಾಸಕರು ಸಹಕಾರ ನೀಡಲಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಜನವರಿ 26ಕ್ಕೆ ದುರ್ಗಕ್ಕೆ ಭದ್ರಾ ನೀರು | ಕೆರೆಗಳಿಗೆ ಹರಿಯಲಿದ್ದಾಳೆ ಭದ್ರೆ
ಜಿಲ್ಲೆಯ ಜೀವನಾಡಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಜನವರಿ ತಿಂಗಳಲ್ಲಿ ಜಿಲ್ಲೆಗೆ ನೀರು ಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದರು.
ಪತ್ರಕರ್ತರಿಗೆ ಅಗತ್ಯವಾಗಿ ಬೇಕಾದ ಕೆಲಸಗಳನ್ನು ಮಾಡಿಕೊಡಲು ಜಿಲ್ಲಾ ಸಚಿವರ ಜತೆ ಕೈಜೋಡಿಸುತ್ತೇನೆ.
| ಕೆ.ಎಸ್.ನವೀನ್, ವಿಧಾನ ಪರಿಷತ್ ಸದಸ್ಯರು.
ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಕಾರಿ ರವಿಕುಮಾರ್ (ಟೆಲೆಕ್ಸ್), ಸಂಘದ ಜಿಲ್ಲಾ ಚುನಾವಣಾಕಾರಿಯಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಪ್ಪನಹಳ್ಳಿ ಷಣ್ಮುಖ, ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ, ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಮಾತನಾಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್
ರಾಜ್ಯ ಉಪಾಧ್ಯಕ್ಷ ಮದನಗೌಡ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಡಿವೈಎಸ್‌ಪಿ ಪಿ.ಕೆ.ದಿನಕರ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ವೀರೇಶ್ ಅಪ್ಪು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಸಿದ್ದರಾಜು, ನೂತನ ಪದಾಧಿಕಾರಿಗಳು, ನಾನಾ ಸಂಘಟನೆಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಸಮಾಜದ ಒಳಿತಿಗಾಗಿ ಹಗಲಿರುಳು ಶ್ರಮವಹಿಸಿ ಕೆಲಸ ಮಾಡುವ ಪತ್ರಕರ್ತರ ಕ್ಷೇಮಕ್ಕಾಗಿ 3 ಲಕ್ಷ ನೀಡುತ್ತೇನೆ.
| ಡಾ.ಎಂ.ಚಂದ್ರಪ್ಪ, ಹೊಳಲ್ಕೆರೆ ಶಾಸಕರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
