
CHITRADURGA NEWS | 23 JUNE 2024
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿಯ ವೃತ್ತಿಪರ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನಿವೃತ್ತ ಇಂಜಿನಿಯರ್ ಬಿ.ಎ.ಪರಮೇಶ್ವರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ತಾಲ್ಲೂಕು ಕೇಂದ್ರದಲ್ಲಿ ಸುಸಜ್ಜಿತ ಕ್ರೀಡಾಂಗಣ | ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ
ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ ಪೀರ್‌ರವರ ಅನುಮೋದನೆ ಮೇರೆಗೆ ಬಿ.ಎ.ಪರಮೇಶ್ವರಪ್ಪ ಅವರನ್ನು ನೇಮಕ ಮಾಡಲಾಗಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿ.ಎ.ಪರಮೇಶ್ವರಪ್ಪ ಅವರಿಗೆ ನೇಮಕಾತಿ ಪತ್ರ ನೀಡಲಾಯಿತು.
ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ | ಚಿತ್ರದುರ್ಗ ಎಎಪಿ ಕಾರ್ಯಕರ್ತರ ಸಂಭ್ರಮ
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಹೆಚ್.ಹನುಮಂತಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾಜ್‌ಪೀರ್, ಮಾಜಿ ಜಿಲ್ಲಾಧ್ಯಕ್ಷ ಫಾತ್ಯರಾಜನ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ವೃತ್ತಿಪರ ವಿಭಾಗದ ಜಿಲ್ಲಾ ಅಧ್ಯಕ್ಷ ಮಹಡಿ ಶಿವಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್, ಸಂಪತ್‌ಕುಮಾರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
