By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    8 hours ago
    ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
    8 hours ago
    ಗರ್ಭಪಾತ ತಪ್ಪಿಸಲು ಜಾಗೃತಿ
    ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
    9 hours ago
    'Swachhata Hi Seva' Campaign
    ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
    9 hours ago
    BK Hariprasad
    ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್‌ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್‌
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    18 hours ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    20 hours ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    21 hours ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    2 days ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    3 days ago
Reading: ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್

News Desk Chitradurga News
Last updated: 17 May 2026 19:32
News Desk Chitradurga News
5 months ago
Share
ನಿವೃತ್ತ IPS ಅಧಿಕಾರಿ ಗಗನ್‍ದೀಪ್ ಗೌರವ ಸಮರ್ಪಣೆ
ನಿವೃತ್ತ IPS ಅಧಿಕಾರಿ ಗಗನ್‍ದೀಪ್ ಗೌರವ ಸಮರ್ಪಣೆ
SHARE

CHITRADURGA NEWS | 17 MAY 2026

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದಾಗ ಕ್ಷಿಷ್ಟಕರ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಸಂತೆಹೊಂಡದಲ್ಲಿ ಬಸ್ ಬಿದ್ದು 60 ಜನ ಮೃತಪಟ್ಟಿದ್ದು, ಐಮಂಗಲದಲ್ಲಿ ನಟೋರಿಯಸ್ ಕ್ರಿಮಿನಲ್ ಉಮೇಶ್‍ರೆಡ್ಡಿಯನ್ನು ಬಂಧಿಸಿದ್ದನ್ನು ನೆನಪಿಸಿಕೊಂಡ ಐ.ಪಿ.ಎಸ್. ಅಧಿಕಾರಿ ಕೆ.ವಿ.ಗಗನ್‍ದೀಪ್ ಭಾವುಕರಾದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 

1996 ರಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆಯಿಂದ ಪೊಲೀಸ್ ಇಲಾಖೆಗೆ ನೇಮಕಗೊಂಡ ಅವರಿಗೆ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗೌರವ ಸಮರ್ಪಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

1990 ರಲ್ಲಿ ಪುತ್ತೂರಿನಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿದ್ದಾಗ ಅಲ್ಲಿನ ರಕ್ಷಣಾಧಿಕಾರಿ ನನ್ನ ಕೈಗೆ ಫೈಲ್ ಕೊಟ್ಟು ಪೊಲೀಸ್ ಪೇದೆಗಳ ನೇಮಕ ಮಾಡುವಂತೆ ಸೂಚಿಸಿದರು. ಆಗ ನನಗೆ ಭಯವಾಯಿತು. 

ಬೆಳಗಾಂ, ಬಳ್ಳಾರಿಯಲ್ಲಿಯೂ ಎಸ್ಪಿ ಆಗಿದ್ದಾಗ ಪೊಲೀಸ್ ಪೇದೆಗಳ ನೇಮಕ ಮಾಡಿದ್ದೇನೆ. ಅದೇ ರೀತಿ 1996 ರಲ್ಲಿ ಚಿತ್ರದುರ್ಗ ಎಸ್ಪಿ ಆಗಿ ಬಂದಾಗ 250 ಪೇದೆಗಳ ನೇಮಕ ಮಾಡಿದ್ದೇನೆ. ನನ್ನ ಅಧಿಕಾರವಧಿಯಲ್ಲಿ ಎಲ್ಲಾ ಕಡೆ ಪಾರದರ್ಶಕವಾಗಿ ನೇಮಕ ಮಾಡಿದ್ದೇನೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಆಸ್ಪದ ಕೊಟ್ಟಿಲ್ಲ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಎಸ್ಟಾಬ್ಲಿಷ್‍ಮೆಂಟ್ ಸೆಕ್ಷನ್‍ನವರು ಸರಿಯಾಗಿ ಫೈಲ್‍ಗಳನ್ನು ಪುಟ್‍ಅಪ್ ಮಾಡದಿದ್ದರೆ ಸಿಬ್ಬಂದಿಗಳು ಬಡ್ತಿಯಲ್ಲಿ ಅನ್ಯಾಯಕ್ಕೊಳಗಾಗಬೇಕಾಗುತ್ತದೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಿಯವರೆಗೂ ಬಡ್ತಿ ಮುಖ್ಯ. 

ಇದನ್ನೂ ಓದಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಅಹ್ವಾನ

ನಿವೃತ್ತಿಯಾದ ಮೇಲೆ ಬಡ್ತಿಯ ಮಹತ್ವ ಏನು ಎನ್ನುವುದು ಗೊತ್ತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರಿ ಎನ್ನುವುದು ಕಠಿಣವಾಗುತ್ತಿದೆ. ಅದೃಷ್ಟವಶಾತ್ ನಾನು ಕೆಲಸ ಮಾಡಿದ ಕಡೆಗೆಲ್ಲಾ ಸಿಬ್ಬಂದಿಗಳ ಹಾಗೂ ಮೇಲಾಧಿಕಾರಿಗಳ ಸಹಕಾರ ಸಿಕ್ಕ ಕಾರಣ ಎಂತಹ ಸಮಸ್ಯೆ ಎದುರಾದರೂ ಧೈರ್ಯವಾಗಿ ನಿಭಾಯಿಸಿದ್ದೇನೆ. 

1996 ನೇ ಬ್ಯಾಚ್‍ನವರು ನನ್ನನ್ನು ಆಹ್ವಾನಿಸಿ ಗೌರವಿಸಿದಂತ ಸನ್ನಿವೇಶವನ್ನು ನನ್ನ ಜೀವನದಲ್ಲಿ ಮತ್ತೊಮ್ಮೆ ನೋಡಲಾರೆ ಎಂದು ಕೃತಜ್ಞತೆ ಸಮರ್ಪಿಸಿದರು.

ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಬಿ.ಆರ್.ರವಿಕಾಂತೆಗೌಡ ಗೌರವ ಸಮರ್ಪಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಕೆ.ವಿ.ಗಗನ್‍ದೀಪ್‍ರವರು ಯಾವುದೇ ರಾಜಕೀಯ ಒತ್ತಡ, ಆಸೆ ಆಮಿಷಗಳಿಗೆ ಒಳಗಾಗದೆ ಪಾರದರ್ಶಕವಾಗಿ 250 ಪೊಲೀಸ್ ಪೇದೆಗಳನ್ನು ನೇಮಕ ಮಾಡಿ ಕೈಕೆಳಗಿನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹವನ್ನು ಕೊಡುತ್ತಿದ್ದರು. 

ಇದನ್ನೂ ಓದಿ: ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸ್ ಕಮೀಷನರ್ ಆಗಿದ್ದಾಗ ಕೆಲವೊಂದು ದಿಟ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಆಗ ಇವರ ಮೇಲೆ ಷಡ್ಯಂತ್ರಗಳು ನಡೆದವು ಎನ್ನುವುದನ್ನು ನೆನಪಿಸಿಕೊಂಡರು.

ಪ್ರಾಮಾಣಿಕತೆ ಬಾಯಲ್ಲಿದ್ದರೆ ಸಾಲದು. ಜೀವನದಲ್ಲಿ ಅಳವಡಿಕೊಳ್ಳಬೇಕು. ಅಕ್ರಮ ಮದ್ಯೆ ದಂಧೆಯನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಟ್ಟ ಹಾಕಿದ ಯಶಸ್ಸು 

ಕೆ.ವಿ.ಗಗನ್‍ದೀಪ್‍ರವರಿಗೆ ಸಲ್ಲುತ್ತದೆ. ಅವರ ಪತ್ನಿ ಡಾ.ಎ.ಎಸ್.ವಿಜಯಲಕ್ಷ್ಮಿರವರು ಎಂದಿಗೂ ತಮ್ಮ ಪತಿಯ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡವರಲ್ಲ. 

ಒಬ್ಬ ಪೊಲೀಸ್ ಅಧಿಕಾರಿಗೆ ಬದ್ದತೆಯಿರಬೇಕೆನ್ನುವುದನ್ನು ತಮ್ಮ ನಡವಳಿಕೆಯಲ್ಲಿ ತೋರಿಸಿಕೊಟ್ಟವರು ಕೆ.ವಿ.ಗಗನ್‍ದೀಪ್ ಎಂದು ಶ್ಲಾಘಿಸಿದರು.

ಪೊಲೀಸರು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ಮೂಲಕ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಿಸಿ ಇಲಾಖೆಯ ಗೌರವವನ್ನು ಎತ್ತಿಹಿಡಿಯುವಂತೆ ಪೊಲೀಸರಿಗೆ ಕರೆ ನೀಡಿದರು.

ಇದನ್ನೂ ಓದಿ: ರೋಟರಿ ಬಾಲಭವನದಲ್ಲಿ ವತಿಯಿಂದ ರಕ್ತದಾನ ಶಿಬಿರ

ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಭಂಡಾರು ಮಾತನಾಡಿ, ಅಧಿಕಾರದಲ್ಲಿದ್ದಾಗ ಎಲ್ಲರೂ ಗೌರವಿಸುವುದು ಸಹಜ. ನಿವೃತ್ತಿಯಾದ ನಂತರ ಗೌರವ ಸಿಗುವುದು ತುಂಬಾ ಕಡಿಮೆ. 

1996 ರಲ್ಲಿ ಪೇದೆಗಳ ಹುದ್ದೆಗೆ ನೇಮಕಗೊಂಡ ನೀವುಗಳು ಇಷ್ಟೊಂದು ಅಭಿಮಾನಿವಟ್ಟು ಕೆ.ವಿ.ಗಗನ್‍ದೀಪ್‍ರವರನ್ನು ಆಹ್ವಾನಿಸಿ ಸನ್ಮಾನಿಸುತ್ತಿರುವುದನ್ನು ನೋಡಿದರೆ ಅವರ ಕಾಲದಲ್ಲಿ ನೇಮಕ ಎಷ್ಟು ಪಾರದರ್ಶಕವಾಗಿತ್ತೆನ್ನುವುದು ಗೊತ್ತಾಗುತ್ತದೆ. ಒತ್ತಡದ ನಡುವೆ ಕೆಲಸ ಮಾಡುವ ಪೊಲೀಸರಿಗೆ ಇಂತಹ ಸ್ನೇಹ ಸಮ್ಮಿಲನ ಕೂಟ ಅತ್ಯವಶ್ಯಕ. ಇದರಿಂದ ಮನಸ್ಸಿಗೆ ಮನರಂಜನೆ ಸಿಕ್ಕಂತಾಗುತ್ತದೆಂದರು.

ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ.ಮಾತನಾಡಿ, 1996 ರಲ್ಲಿ ನೇಮಕಗೊಂಡ ನಿಮಗೆಲ್ಲಾ ಬದುಕು ಕೊಟ್ಟ ಕೆ.ವಿ.ಗಗನ್‍ದೀಪ್‍ರವರನ್ನು ಮರೆಯದೆ ಕರೆಸಿ ಸನ್ಮಾನಿಸುತ್ತಿರುವುದನ್ನು ಗಮನಿಸಿದರೆ ನಿಮ್ಮಲ್ಲಿ ಕೃತಜ್ಞತಾ ಭಾವನೆಯಿದೆ ಎನ್ನುವುದು ಗೊತ್ತಾಗುತ್ತದೆ. 

ಇದನ್ನೂ ಓದಿ: ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಏನಾಗುತ್ತದೆ ಗೊತ್ತಾ?

ಹುಟ್ಟು ಆಕಸ್ಮಿಕ, ಸಾವು ಖಂಡಿತ ಇವೆರಡರ ನಡುವೆ ಉಳಿಯುವುದೇ ಮಾಡುವ ಒಳ್ಳೆಯ ಕೆಲಸಗಳು. ಕೆ.ವಿ.ಗಗನ್‍ದೀಪ್‍ರವರು ಅಧಿಕಾರದಲ್ಲಿದ್ದಾಗ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ನಿವೃತ್ತಿಯ ನಂತರವೂ ಕ್ರೀಯಾಶೀಲರಾಗಿದ್ದಾರೆ. ಇಲಾಖೆಯಲ್ಲಿ ಶಿಸ್ತು ಕಡಿಮೆಯಾಗುತ್ತಿದೆ. ಮುಂದೆ ಗುರಿ, ಹಿಂದೆ ಗುರು ಇದ್ದಾಗ ಮಾತ್ರ ಜೀವನದಲ್ಲಿ ಏನಾದರೂ ಯಶಸ್ಸು ಗಳಿಸಬಹುದು ಎಂದು ಹೇಳಿದರು.

ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಹೆಚ್ಚು ರಕ್ಷಣಾಧಿಕಾರಿಗಳಾದ ಡಾ.ಶಿವಕುಮಾರ್ ಆರ್. ಪರಮೇಶ್ವರ ಹೆಚ್. ಡಿವೈಎಸ್ಪಿ. ಉಮೇಶ್ ಈಶ್ವರ್‍ನಾಯ್ಕ, ಡಾ.ಎ.ಎಸ್.ವಿಜಯಲಕ್ಷ್ಮಿ ಗಗನ್‍ದೀಪ್, ಜೈಲರ್ ಸಿದ್ದರಾಮಯ್ಯ ಇವರುಗಳು ವೇದಿಕೆಯಲ್ಲಿದ್ದರು. 1996 ರಲ್ಲಿ ನೇಮಕಗೊಂಡ 250 ಪೊಲೀಸ್ ಪೇದೆಗಳ ಕುಟುಂಬದವರು ಗೌರವ ಸಮರ್ಪಣೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsretired IPS officer GagandeepTributeಗೌರವ ಸಮರ್ಪಣೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿವೃತ್ತ IPS ಅಧಿಕಾರಿ ಗಗನ್‍ದೀಪ್
Share This Article
Facebook Email Print
Previous Article ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 
Next Article today bhavishya ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
ಮುಖ್ಯ ಸುದ್ದಿ
ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
ಮುಖ್ಯ ಸುದ್ದಿ
ಗರ್ಭಪಾತ ತಪ್ಪಿಸಲು ಜಾಗೃತಿ
ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
ಮುಖ್ಯ ಸುದ್ದಿ
'Swachhata Hi Seva' Campaign
ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up