ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ಇನ್ನಿಲ್ಲ

ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ

ಚಿತ್ರದುರ್ಗ ನ್ಯೂಸ್.ಕಾಂ: ನಿವೃತ್ತ ಉಪನ್ಯಾಸಕ ಚಿತ್ರದುರ್ಗದ ಬಸವೇಶ್ವರ ನಗರದ ನಿವಾಸಿ ಸಿ.ಆರ್.ಮಾಧವ ರೆಡ್ಡಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.

83 ವರ್ಷ ವಯಸ್ಸಾಗಿದ್ದ ಮಾಧವರೆಡ್ಡಿ ಅವರನು ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಇದನ್ನೂ ಓದಿ: ಮೂರು ಕರಡಿಗಳಿಂದ ವೃದ್ಧೆಯ ಮೇಲೆ ಮಾರಣಾಂತಿಕ ದಾಳಿ

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಹಲವು ವರ್ಷಗಳ ಕಾಲ ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಸಿ.ಆರ್.ಮಾಧವರೆಡ್ಡಿ ಅವರ ಅಂತ್ಯಕ್ರಿಯೆ ಸೋಮವಾರ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version