ಮುಖ್ಯ ಸುದ್ದಿ
ಮೂರನೇ ಸ್ಥಾನ ತಂದ ಮೂರು ಅಂಕ | ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ ಎಫೆಕ್ಟ್

Published on
CHITRADURGA NEWS | 06 JUNE 2024
ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದ ವಿದ್ಯಾರ್ಥಿ ಇದೀಗ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನಗಳಿಸಿದ್ದಾನೆ.
ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಸಿ.ಐ.ಅಭಯ್ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕ ಪಡೆದು ರಾಜ್ಯಕ್ಕೆ 3ನೇ ಸ್ಥಾನಗಳಿಸಿದ್ದಾನೆ.
ಕ್ಲಿಕ್ ಮಾಡಿ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ | ಕುತೂಹಲ ಮೂಡಿಸಿದ ಫಲಿತಾಂಶ

ಈ ಹಿಂದೆ 625ಕ್ಕೆ 620 ಅಂಕಗಳನ್ನುಗಳಿಸಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದನು. ಆದರೆ ಮರು ಮೌಲ್ಯಮಾಪನದಲ್ಲಿ 3 ಅಂಕಗಳನ್ನು ಹೆಚ್ಚುಗಳಿಸಿ 623 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನಗಳಿಸಿದ್ದಾನೆ. ವಿದ್ಥಾರ್ಥಿ ಸಾಧನಗೆ ಶಾಲಾ ಆಡಳಿತ ಮಂಡಳಿ ಹಾಗು ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿದೆ ಎಂದು ಸಂಸ್ಥೆ ಮುಖ್ಯಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
Continue Reading
Related Topics:Effect, Kannada News, Revaluation, SSLC, Student, ಎಫೆಕ್ಟ್, ಎಸ್‌ಎಸ್‌ಎಲ್‌ಸಿ, ಕನ್ನಡ ನ್ಯೂಸ್, ಮರು ಮೌಲ್ಯಮಾಪನ, ವಿದ್ಯಾರ್ಥಿ

Click to comment