
ಚಿತ್ರದುರ್ಗ ನ್ಯೂಸ್.ಕಾಂ
ಕಂದಾಯ ಇಲಾಖೆ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಳ್ಳಕೆರೆ ನಗರದಲ್ಲಿ ಭಾನುವಾರ ನಡೆದಿದೆ.
ಚಳ್ಳಕೆರೆ ತಾಲ್ಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಎಂ.ಗುರುಲಿಂಗಣ್ಣ (52) ವಾಲ್ಮೀಕಿ ನಗರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ಚಿತ್ರದುರ್ಗ ತಾಲ್ಲೂಕು ದೊಡ್ಡಗಟ್ಟ ಗ್ರಾಮದ ಗುರು ಲಿಂಗಣ್ಣ ಕಳೆದ 32 ವರ್ಷದಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗ್ರಾಮ ಲೆಕ್ಕಾಧಿಕಾರಿಯಾಗಿ ವೃತ್ತಿ ಪ್ರಾರಂಭಿಸಿದ ಇವರು ತಾಲ್ಲೂಕು ಕಚೇರಿ ಭೂಮಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಚೆಗೆ ಪ್ರಥಮ ದರ್ಜೆ ಸಹಾಯಕರಾಗಿ ಬಡ್ತಿ ಹೊಂದಿದ್ದರು. ಇವರನ್ನು ಚುನಾವಣಾ ಶಾಖೆಗೆ ನಿಯೋಜನೆ ಮಾಡಲಾಗಿತ್ತು.
ತಾಲ್ಲೂಕಿನ ತಿಮ್ಮಪ್ಪಯ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಪತ್ನಿ ವಿಜಯಕಲಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾವನಾ, ಮಾನ್ಯ ಎಂಬ ಪುತ್ರಿಯರಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಹಾಗೂ ಕಸಬಾ ಕಂದಾಯ ನಿರೀಕ್ಷಕ ಲಿಂಗೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
