CHITRADURGA NEWS | 25 APRIL 2026
ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ವಿತರಿಸಬೇಕಾದ ಪಡಿತರ ಅಕ್ಕಿ, ಗೋಧಿ, ರಾಗಿ ಹಾಗೂ ಅಂಗನವಾಡಿ ಕೇಂದ್ರಗಳ ಪುಷ್ಠಿ ಮತ್ತು ಮಿಲೆಟ್ ಲಡ್ಡುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿ, ದೊಡ್ಡ ಪ್ರಮಾಣದ ಆಹಾರ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
ಚಿತ್ರದುರ್ಗ ನಗರದ ಹಳೇ ಬೆಂಗಳೂರು ರಸ್ತೆಯ ಇಂಡಸ್ಟ್ರಿಯಲ್ ಏರಿಯಾದ ಶ್ರೀ ಸಾಯಿ ಏಜೆನ್ಸಿ ಎದುರಿನ ಶೆಡ್‌ವೊಂದರಲ್ಲಿ ಪಡಿತರ ಧಾನ್ಯಗಳನ್ನು ಶೇಖರಿಸಿರುವ ಬಗ್ಗೆ ಅಪರಿಚಿತ ವ್ಯಕ್ತಿ ಬಡಾವಣೆ ಪೊಲೀಸ್ ಠಾಣೆ ಅಧಿಕಾರಿಗಳಿಗೆ ದೂರು ನೀಡಿದ್ದರ ಮೇರೆಗೆ ಚಿತ್ರದುರ್ಗ ಅನೌಪಚಾರಿಕ ಪಡಿತರ ಪ್ರದೇಶದ ಆಹಾರ ನಿರೀಕ್ಷಕರಾದ ಎಂ. ರಜನಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ ಸರ್ಕಾರದಿಂದ ವಿವಿಧ ಯೋಜನೆಗಳಲ್ಲಿ ವಿತರಿಸುವ ಅಕ್ಕಿ, ರಾಗಿ, ಗೋದಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುವ ಪುಷ್ಠಿ ಮತ್ತು ಮಿಲೆಟ್ ಲಡ್ಡುಗಳು ಇರುವುದು ಪತ್ತೆಯಾಗಿದೆ. ಈ ಕುರಿತು ಸಾರ್ವಜನಿಕರಿಗೆ ವಿಚಾರಣೆ ನಡೆಸಿದಾಗ ಈ ಮಾಲು ಸೈಯದ್ ಮುಜ್ಜು ಎಂಬುವವರಿಗೆ ಸೇರಿದ್ದೆಂದು ತಿಳಿದುಬಂದಿದೆ.
ಇದನ್ನೂ ಓದಿ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ದಾಳಿಯ ವೇಳೆ ಒಟ್ಟು 105.60 ಕ್ವಿಂಟಾಲ್ ಅಕ್ಕಿ, 71.60 ಕ್ವಿಂಟಾಲ್ ಗೋಧಿ, 26.70 ಕ್ವಿಂಟಾಲ್ ರಾಗಿ ಹಾಗೂ 4 ಪ್ಯಾಕೆಟ್ ಮಿಲೆಟ್ ಲಡ್ಡು ಮತ್ತು 7 ಪ್ಯಾಕೆಟ್ ಪುಷ್ಟಿ ಆಹಾರವನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
