By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    10 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    10 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    11 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    21 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    9 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    22 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    21 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    22 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ | ಜಿಲ್ಲಾಧಿಕಾರಿ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ | ಜಿಲ್ಲಾಧಿಕಾರಿ ವೆಂಕಟೇಶ್

News Desk Chitradurga News
Last updated: 13 April 2026 07:03
News Desk Chitradurga News
5 months ago
Share
ರಸ್ತೆ ಸುರಕ್ಷತಾ ಸಮಿತಿ ಸಭೆ
ರಸ್ತೆ ಸುರಕ್ಷತಾ ಸಮಿತಿ ಸಭೆ
SHARE

CHITRADURGA NEWS | 11 APRIL 2026

ಚಿತ್ರದುರ್ಗ: ವೈಜ್ಞಾನಿಕವಾಗಿ ರಸ್ತೆಗಳ ನಿರ್ವಹಣೆ ಮಾಡುವುದರಿಂದ ಸಾಕಷ್ಟು ರಸ್ತೆ ಅಪಘಾತಗಳನ್ನು ತಡೆಯಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅವೈಜ್ಞಾನಿಕ ರಸ್ತೆ, ಹಂಪ್‌ಗಳು ಅಪಘಾತಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಇವುಗಳನ್ನು ಕೂಡಲೇ ಸರಿಪಡಿಸಬೇಕು. ರಸ್ತೆ ಸುರಕ್ಷತೆಗೆ ಪೂರಕವಾದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅತಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. 

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಕ್ರಮವಾಗಿ ಪಾರ್ಕಿಂಗ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಇಂತಹ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪೊಲೀಸ್ ಉಪಾಧೀಕ್ಷಕರು ಅಫಘಾತಗಳನ್ನು ಇಳಿಮುಖಗೊಳಿಸಲು ತಮ್ಮ ವ್ಯಾಪ್ತಿಯಲ್ಲಿನ ಅಪಘಾತ ವಲಯ ಹಾಗೂ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಅಲ್ಲಿ ಕೈಗೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ವರದಿಯನ್ನು ಕಳುಹಿಸಿಕೊಡಿ, ಸಂಬಂಧ ಪಟ್ಟವರು ರಸ್ತೆ ಸುಧಾರಣೆ ಕ್ರಮ ಕೈಗೊಂಡು ಸಮಿತಿಗೆ ಅನುಪಾಲನೆ ವರದಿ ನೀಡಬೇಕು. 

ಇದನ್ನೂ ಓದಿ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದೇ ಅಪಘಾತಗಳು ಸಂಭವಿಸಿದರೆ ಸಂಬಂಧ ಪಟ್ಟ ಅಧಿಕಾರಿಯ ವಿರುದ್ದ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. 

ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ಚಿಕಿತ್ಸೆ ದೊರೆಯುವಂತೆ ಆರೋಗ್ಯ ಇಲಾಖೆಯು ಕ್ರಮವಹಿಸಬೇಕು. ರಸ್ತೆ ಸುರಕ್ಷತೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಅಮೂಲ್ಯವಾದ ಜೀವಗಳನ್ನು ಉಳಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಅಪಘಾತಗಳಲ್ಲಿ ಇಳಿಮುಖ : ಬೇಕಿದೆ ಇನ್ನೂ ಹೆಚ್ಚಿನ ಸುಧಾರಣೆ

 ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಇಳಿಮುಖವಾಗಿದೆ. ಅಪಘಾತಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಲೋಕೋಪಯೋಗಿ, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. 

ಇದನ್ನೂ ಓದಿ: ಮಾತೃ ಭಾಷೆ ಜೊತೆಗೆ ಆಂಗ್ಲ ಭಾಷೆ ಕಲಿಯಿರಿ | ಯೋಗೀಶ್ ಸಹ್ಯಾದ್ರಿ

ವಿಶೇಷವಾಗಿ ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಅತ್ಯಂತ ನಿರ್ಣಾಯಕವಾಗಿದ್ದು, ಆರೋಗ್ಯ ಇಲಾಖೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ತಿಳಿಸಿದರು.

2023 ರಲ್ಲಿ ಒಟ್ಟು 441 ಪ್ರಾಣಾಪಾಯಕಾರಿ ಅಪಘಾತಗಳು ಸಂಭವಿಸಿದ್ದು, 463 ಜನರು ಸಾವನ್ನಪ್ಪಿದ್ದರು. ಒಟ್ಟು 1,110 ಸಾಮಾನ್ಯ ಅಪಘಾತಗಳಲ್ಲಿ 2,600 ಜನರು ಗಾಯಗೊಂಡಿದ್ದರು. 2024 ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 419ಕ್ಕೆ ಇಳಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆ ಕಂಡುಬಂದಿತ್ತು. ಕಟ್ಟುನಿಟ್ಟಿನ ಕ್ರಮಗಳಿಂದಾಗಿ 2025ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 384ಕ್ಕೆ ಕುಸಿದಿದೆ. ಅಂದರೆ ಸುಮಾರು 35 ಅಪಘಾತಗಳು ಕಡಿಮೆಯಾಗಿವೆ. ಸಾವಿನ ಸಂಖ್ಯೆಯು 471 ರಿಂದ 425ಕ್ಕೆ ಇಳಿಕೆಯಾಗುವ ಮೂಲಕ ಸುಮಾರು 50 ಜನರ ಜೀವ ಉಳಿಸಲಾಗಿದೆ.

ಅಪಘಾತಗಳ ಸಂಖ್ಯೆ ಇಳಿಕೆಯಾಗಲು ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಪಘಾತಗಳಿಗೆ ಮುಖ್ಯ ಕಾರಣವಾಗುತ್ತಿರುವ ಅಂಶಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ 2023ರಲ್ಲಿ ಇಡೀ ವರ್ಷಕ್ಕೆ 365 ಪ್ರಕರಣಗಳಿದ್ದರೆ, 2026ರ ಮೊದಲ ಮೂರು ತಿಂಗಳಲ್ಲೇ 321 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…

1,599 ಅತಿವೇಗದ ಪ್ರಕರಣಗಳನ್ನು ದಾಖಲಿಸಲಾಗಿದೆ. ಬ್ಲ್ಯಾಕ್ ಸ್ಪಾಟ್‌ಗಳ ಗುರುತಿಸುವಿಕೆ, ಹೆಲ್ಮೆಟ್ ಜಾಗೃತಿ, ಪ್ರತಿಫಲಕ ಸ್ಟಿಕ್ಕರ್ ಅಳವಡಿಕೆ, ಡಿಎಲ್ ರದ್ದತಿ ಶಿಫಾರಸು ಮತ್ತು ರಸ್ತೆ ಬದಿಯ ಅಕ್ರಮ ಪಾರ್ಕಿಂಗ್ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.

ಅಕ್ರಮ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ:

 ಪರವಾನಿಗೆ ಪಡೆಯದೇ ಹಾಗೂ ನೊಂದಣಿ ಇಲ್ಲದೇ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ಯಾಕ್ಟರ್-ಟ್ಯಾಲಿಲಿಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 7,993 ಆಟೋಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ಒಟ್ಟು ನೋಂದಾಯಿತ ಆಟೋಗಳ ಸಂಖ್ಯೆ 10,223 ರಷ್ಟಿದ್ದು, ಸುಮಾರು 2,230 ಆಟೋಗಳು ಪರವಾನಗಿ ಇಲ್ಲದೆ ರಸ್ತೆಗಿಳಿಯುತ್ತಿರುವುದು ಗಮನಕ್ಕೆ ಬಂದಿದೆ. ಪರವಾನಗಿ ಇಲ್ಲದ ಆಟೋಗಳ ಪೈಕಿ ಸುಮಾರು 1,000 ವಾಹನಗಳು ಬೇರೆಡೆಗೆ ಸ್ಥಳಾಂತರವಾಗಿರಬಹುದು ಅಥವಾ ನೋಂದಣಿ ರದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. 

ಇದನ್ನೂ ಓದಿ: ಮೇ.1 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ಧಿಷ್ಠಾವಧಿ ಹೋರಾಟ

ಆದಾಗ್ಯೂ, ಇನ್ನುಳಿದ ಒಂದು ಸಾವಿರಕ್ಕೂ ಅಧಿಕ ಆಟೋಗಳು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ತಕ್ಷಣವೇ ಜಂಟಿ ಕಾರ್ಯಾಚರಣೆ ನಡೆಸಲಾಗುವುದು. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್‌ಗಳಿದ್ದು, ಆಂದೋಲದನದ ಮೂಲಕ 2500 ಟ್ಯಾಕ್ಟರ್‌ಗಳಿಗೆ ಮಾತ್ರ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದ್ದು, ಎಲ್ಲ ಟ್ಯಾಕ್ಟರ್‌ಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಆಂದೋಲನ ಮುಂದುವರಿಸುವುದಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸಭೆಯಲ್ಲಿ ಮಾಹಿತಿ ನೀಡಿದರು.

ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕೃಷ್ಣ ಸರ್ಕಲ್ ವೇಗ ನಿಯಂತ್ರಕಗಳನ್ನು ಅಳವಡಿಸಲು ಸೂಚನೆ:

ಹೊಳಲ್ಕೆರೆ ರಸ್ತೆಯಲ್ಲಿನ ಕೃಷ್ಣ ಸರ್ಕಲ್ ಅವೈಜ್ಞಾನಿಕವಾಗಿದ್ದು, 3 ರಸ್ತೆಗಳು ಸಂಗಮಿಸುತ್ತಿದ್ದು, ಅಪಘಾತ ಕಾರಣವಾಗಬಹುದು. ಇದರೊಂದಿಗೆ ಮುರುಘಾ ಮಠದ ಬಳಿ ಹಳೆ ಪಿ.ಬಿ.ರಸ್ತೆಗೆ ಸೇರುವ ರಸ್ತೆಯ ಅಪಘಾತ ವಲಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕೂಡಲೇ ಇಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸಬೇಕು. ಕೃಷ್ಣ ಸರ್ಕಲ್ ವೃತ್ತವನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentChitradurgaChitradurga newsroadRoad Safety Committee Meetingಅಪಘಾತಚಿತ್ರದುರ್ಗಚಿತ್ರದುರ್ಗ ನ್ಯೂಸ್ರಸ್ತೆರಸ್ತೆ ಸುರಕ್ಷತಾ ಸಮಿತಿ ಸಭೆ
Share This Article
Facebook Email Print
Previous Article ದಿನ ಭವಿಷ್ಯ ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
Next Article Rama or Krishna Tulsi ರಾಮ ಅಥವಾ ಕೃಷ್ಣ ತುಳಸಿಯಲ್ಲಿ ಯಾವ ತುಳಸಿ ನಿಮ್ಮ ಮನೆಗೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ? 
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up