
CHITRADURGA NEWS | 12 FEBRUARY 2025
ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ (ಸೇಫ್ಟಿ ಹಾರ್‍ನೆಸ್) ವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿತರಣೆ ಮಾಡಿದರು.
Also Read: ಸೈಬರ್ ವಂಚನೆಗೆ ದೇಶದ ಜನ ಕಳೆದುಕೊಂಡ ಹಣ ಕೇಳಿದ್ರೆ ಶಾಕ್ ಆಗ್ತಿರಿ !
ದ್ವಿಚಕ್ರ ವಾಹನ ಸವಾರರು ಪ್ರತಿಯೊಬ್ಬರೂ ಕೂಡ ಜೀವ ರಕ್ಷಣೆ ಸಂಬಂಧ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲೆಯಲ್ಲಿ ರಾಷ್ಟ್ರೀಯ ಪ್ರಮುಖ ಹೆದ್ದಾರಿಗಳು ಹಾಗೂ ರಾಜ್ಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಗ್ರಾಮೀಣ ಭಾಗದಲ್ಲಿ ರಸ್ತೆ ಅಪಘಾತಗಳು ಆಗುವ ಸಾಧ್ಯತೆ ಇದ್ದು, ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ವಾಹನ ಚಾಲನೆ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ರಸ್ತೆ ನಿಯಮಗಳನ್ನು ಚಾಲಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.
Also Read: ಹೊಸದುರ್ಗ ಬಲ್ಲಾಳ ಸಮುದ್ರ ಕೆರೆಯ ಸೇತುವೆ ವೀಕ್ಷಿಸಿದ ಸಚಿವ ಎನ್.ಎಸ್.ಬೋಸರಾಜು
ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆ ಸಿಂಘೆ ಮಾತನಾಡಿ, ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ 70 ಮಂದಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚಗಳನ್ನು 10 ಮಂದಿಗೆ ಸಾಂಕೇತಿಕವಾಗಿ ವಿತರಣೆ ಮಾಡಲಾಗಿದ್ದು, ವಾಹನ ಸವಾರರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಲೆಗೆ ಪೆಟ್ಟು ಬಿದ್ದು, ಪ್ರಾಣಾಪಾಯದಿಂದ ಪಾರಾಗಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು ಎಂದು ಹೇಳಿದರು.
Also Read: ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ದಿನಕರ್, ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಹೇಮಂತ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

