Connect with us

    ನಮ್ಮ ಅವಧಿಯಲ್ಲೇ ರಸ್ತೆ ಅಗಲೀಕರಣ | ಸಚಿವ ಡಿ.ಸುಧಾಕರ್

    ZP Meating sudhakar

    ಮುಖ್ಯ ಸುದ್ದಿ

    ನಮ್ಮ ಅವಧಿಯಲ್ಲೇ ರಸ್ತೆ ಅಗಲೀಕರಣ | ಸಚಿವ ಡಿ.ಸುಧಾಕರ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 MARCH 2025

    ಚಿತ್ರದುರ್ಗ: ನಗರದ ಪಿಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪುನರುಚ್ಚರಿಸಿದರು.

    ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭೂ ಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಹಾಗೂ ನಗರಸಭೆ ಅಧಿಕಾರಿಗಳು ರಸ್ತೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ, ಅಗಲೀಕರಣ ಕಾರ್ಯಕ್ಕೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

    ಇದನ್ನೂ ಓದಿ; ಸಂಘಟನೆ ರಾಜಕೀಯಕ್ಕೆ ಬಳಸಬೇಡಿ | ಶಾಂತವೀರ ಶ್ರೀ

    ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಸರ್ವೋಚ್ಚ ನ್ಯಾಯಾಲಯವೇ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೇ ರಸ್ತೆ ಅಗಲೀಕರಣಕ್ಕಾಗಿ ಮುಲಾಜು ತೋರದೆ ತೆರವುಗೊಳಿಸುವಂತೆ ಆದೇಶ ನೀಡಿದೆ. ಹಳೆಯ ಪಿಬಿ ರಸ್ತೆಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಾವುದೇ ಮೂಲಾಜು ತೋರಬೇಡಿ ಎಂದು ಹೇಳಿದರು.

    ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಳ್ಳಕೆರೆ ಹಾಗೂ ಹಿರಿಯೂರಿನಿಂದ ಚಿತ್ರದುರ್ಗ ನಗರ ಪ್ರವೇಶ ಮಾಡುವ ಪಿ.ಬಿ.ರಸ್ತೆ ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಆಸ್ಪತ್ರೆಯವರೆಗೆ ಸಾಕಷ್ಟು ವಿಸ್ತಾರವಾಗಿದೆ. ಆದರೆ, ನಗರದ ಮುಖ್ಯಭಾಗದಲ್ಲಿ ಒತ್ತುವಾರಿಯಾಗಿದೆ. ಇದಕ್ಕಿಂತ ಬೇರೆ ನಿದರ್ಶನಬೇಕಿಲ್ಲ. ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಬೇಕು ಎಂದರು.

    ಇದನ್ನೂ ಓದಿ; ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆ ಮತ್ತೆ ಏರಿಕೆ

    ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ದಾವಣಗೆರೆ ಮಹಾನಗರ ಪಾಲಿಕೆ ಒತ್ತುವರಿಯಾಗಿದ್ದ ಪಿ.ಬಿ.ರಸ್ತೆಯನ್ನು ತೆರವುಗಳಿಸಿ ಕ್ರಮಕೈಗೊಂಡಿದೆ. ಚಿತ್ರದುರ್ಗ ನಗರಸಭೆ ಅಧಿಕಾರಿಗಳು ದಾವಣಗೆರೆ ಭೇಟಿ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದರು.

    ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮಾತನಾಡಿ, 1905ರಲ್ಲಿ ನಗರದ ಮುಖ್ಯರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗಿತ್ತು. ತದನಂತರ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ಇದನ್ನು ರಾಜ್ಯ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗಿದೆ. ಆದರೆ ಹೆದ್ದಾರಿ ಅಗಲದ ಅಳೆತೆಯನ್ನು ಕಡಿಮೆ ಮಾಡಿಲ್ಲ.

    ಇದನ್ನೂ ಓದಿ; ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಸನ್ಮಾನ | ಮೆದೇಹಳ್ಳಿ ನೀರಿನ ಸಮಸ್ಯೆ ಇತ್ಯರ್ಥದ ಭರವಸೆ

    ಒತ್ತುವರಿಯಾದ ರಸ್ತೆಯನ್ನು ಅಧಿಕಾರಿಗಳು ಗುರುತಿಸಬೇಕು. ಇದರೊಂದಿಗೆ ನಗರದ ರಾಜಕಾಲುವೆ ಮೇಲಿನ ನಿರ್ಮಾಣಗಳ ತೆರವಿಗೂ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸಂದರ್ಭದಲ್ಲಿ ಹೇಳಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top