Connect with us

PUC ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರ ಪಾತ್ರ ಅತಿ ಮುಖ್ಯ | ಡಿಡಿಪಿಐ ಆರ್.ಪುಟ್ಟಸ್ವಾಮಿ

Workshop

ಮುಖ್ಯ ಸುದ್ದಿ

PUC ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರ ಪಾತ್ರ ಅತಿ ಮುಖ್ಯ | ಡಿಡಿಪಿಐ ಆರ್.ಪುಟ್ಟಸ್ವಾಮಿ

CHITRADURGA NEWS | 18 DECEMBER 2024 

ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಖಾಸಗಿ ಬಸ್ ಮರಕ್ಕೆ ಡಿಕ್ಕಿ 7 ಜನರಿಗೆ ಗಾಯ

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿ, ಈ ಹಿಂದೆ ಉಪನ್ಯಾಸಕನಾಗಿ ಕೆಲಸ ನಿರ್ವಹಿಸುವಾಗ ನೆಮ್ಮದಿಯಿತ್ತು.ಬೋಧನೆ ಹೊರತು ಬೇರೆ ಯಾವುದೇ ಕಾರ್ಯಭಾರ ಇರಲಿಲ್ಲ. ಆದರೆ ಈಗ ಬೋಧನೆ ಸಹಿತ ಇನ್ನಿತರೆ ಕೆಲಸಗಳ ಒತ್ತಡದಲ್ಲಿ ಕಲಿಸುವುದು ಒಂದು ಭಾಗವಾಗಿ ಮಾತ್ರ ಉಳಿದಿದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ಇಂದಿನ ರೇಟ್

ರಾಜ್ಯಶಾಸ್ತ್ರ ವೇದಿಕೆಯ ಅಧ್ಯಕ್ಷ ಡಾ.ಜೆ.ಮೋಹನ್ ಮಾತನಾಡಿ, ಕಾರ್ಯಾಗಾರಗಳು ಫಲಿಶಾಂಶ ಹೆಚ್ಚುಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಪ್ರಾಚಾರ್ಯರಾದ ವಿ.ಲೋಕೇಶ್, ಹೆಚ್.ಬಿ.ನರಸಿಂಹಮೂರ್ತಿ, ಜಿ.ದೇವರಾಜ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಸಂಪನ್ಮೂಲ ವ್ಯಕ್ತಿ ಡಾ.ಎನ್. ಪ್ರಭಾಕರ್ ಉಪಸ್ಥಿತರಿದ್ದರು.

ಕ್ಲಿಕ್ ಮಾಡಿ ಓದಿ: ನಗರಸಭೆ ಬಜೆಟ್ | ಸಾರ್ವಜನಿಕರಿಂದ ಸಲಹೆ, ಸೂಚನೆಗೆ ಸಮಾಲೋಚನಾ ಸಭೆ

ಉಪನ್ಯಾಸಕಿ ಮೀರಾ ನಾಡಿಗ್ ಪ್ರಾರ್ಥಿಸಿದರು. ಉಪನ್ಯಾಸಕ ಬುಡೇನ್‌ಸಾಬ್ ಸ್ವಾಗತಿಸಿದರು. ಪ್ರಾಂಶುಪಾಲರಾದ ಸರೋಜಮ್ಮ ವಂದಿಸಿದರು. ಉಪನ್ಯಾಸಕ ಆರ್.ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version